ದೇಶ- ವಿದೇಶ

ನಿತೀಶ್ ಕುಮಾರ್‌ಗೆ ಬಿಹಾರದ ಸಾರಥ್ಯ? : ನ.20ರಂದು ಪ್ರಮಾಣ ವಚನ ಸ್ವೀಕಾರ

ಪಾಟ್ನಾ : ಪ್ರಚಂಡ ಬಹುಮತ ಪಡೆದು ಪ್ರತಿಪಕ್ಷಗಳನ್ನು ಧೂಳಿಪಟ ಮಾಡಿ ಬಿಹಾರದಲ್ಲಿ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ನ.೧೯ ಇಲ್ಲವೇ ೨೦ರಂದು ಅಧಿಕೃತವಾಗಿ ಸರ್ಕಾರ ರಚನೆ ಮಾಡಲಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಕಿರಿಕಿರಿ ಮಾಡಿಕೊಳ್ಳದೆ ನಿತೀಶ್ ಕುವಾರ್ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಂತಿಮ ವೇಳಾಪಟ್ಟಿಯನ್ನು ಅವಲಂಬಿಸಿ, ಪ್ರಮಾಣವಚನ ಸ್ವೀಕಾರ ಸವಾರಂಭದ ದಿನಾಂಕ ನಿಗದಿಯಾಗಲಿದೆ. ಪಾಟ್ನಾ ಗಾಂಧಿ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಈ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆಯಿದೆ.

ಚುನಾವಣಾ ಆಯೋಗವು ೧೮ನೇ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಸಲ್ಲಿಸಿದೆ. ಇದರ ನಂತರ, ಹೊಸ ವಿಧಾನಸಭೆಯನ್ನು ರಚಿಸುವ ಅಧಿಸೂಚನೆ ಹೊರಡಿಸಲಾಗುವುದು. ಇದರೊಂದಿಗೆ, ಮಾದರಿ ನೀತಿ ಸಂಹಿತೆ ಅಧಿಕೃತವಾಗಿ ಅಂತ್ಯಗೊಳ್ಳಲಿದೆ.

ಇದನ್ನು ಓದಿ: ನವೆಂಬರ್.‌19 ಅಥವಾ 20ರಂದು ಬಿಹಾರದಲ್ಲಿ ಅಧಿಕೃತ ಸರ್ಕಾರ ರಚನೆ

ಸೋಮವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲ ಅರೀಫ್ ಮೊಹಮದ್ ಖಾನ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ಎನ್‌ಡಿಎ ಬೆಂಬಲಿತ ಶಾಸಕರ ಪತ್ರಗಳನ್ನು ರಾಜ್ಯಪಾಲರಿಗೆ ನೀಡಲಿದ್ದು, ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಹಕ್ಕು ಮಂಡಿಸಲಿದ್ದಾರೆ.
ವಿಧಾನಸಭೆಯನ್ನು ವಿಸರ್ಜನೆಗೊಳಿಸಿದ ನಂತರ ರಾಜ್ಯಪಾಲರು ಸರ್ಕಾರ ರಚನೆಗೆ ಅಧಿಕೃತವಾಗಿ ಆಹ್ವಾನ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ಎಲ್ಲಾ ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದು, ಬಳಿಕ ಮತ್ತೊಮ್ಮೆ ಸರ್ಕಾರ ರಚನೆಗೆ ಹಕ್ಕು ಮಂಡಿಸುವರು.

೧೮ನೇ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಸ್ಪಷ್ಟ ಬಹುಮತ ಗಳಿಸಿದೆ. ಬಿಜೆಪಿ ೮೯ ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾ ದಳ ೮೫ ಸ್ಥಾನಗಳನ್ನು ಪಡೆದು ಎರಡನೇ ಸ್ಥಾನದಲ್ಲಿದೆ. ಎಲ್‌ಜೆಪಿ ೧೯ ಸ್ಥಾನ, ಎಚ್‌ಎಎಂ ೫ ಸ್ಥಾನ, ಮತ್ತು ರಾಷ್ಟ್ರೀುಯ ಲೋಕ ಮೋರ್ಚಾ ೪ ಸ್ಥಾನಗಳನ್ನು ಗೆದ್ದಿವೆ. ಮಹಾಘಟಬಂಧನ್ ಕೇವಲ ೩೫ ಸ್ಥಾನಗಳನ್ನು ಮಾತ್ರ ಪಡೆಯಲು ಶಕ್ತವಾಗಿದೆ.

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

2 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

2 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

2 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

12 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

12 hours ago