ಪಾಟ್ನಾ: ರಾಜ್ಯದಲ್ಲಿ ಅಭೂತಪೂರ್ವ ಜನಾದೇಶ ಪಡೆದು ಮತ್ತೆ ಅಧಿಕಾರ ಹಿಡಿದಿರುವ ಹಿನ್ನಲೆಯಲ್ಲಿ ಹತ್ತನೆ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಾಳೆ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈಗಾಗಲೇ ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ನಿತೀಶ್ ಕುಮಾರ್ ಅವರು, ನಾಳೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯಲಿರುವ ನಿತೀಶ್ ಕುಮಾರ್ ಪಟ್ಟಾಭಿಷೇಕಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಕ್ಷಿಯಾಗಲಿದ್ದಾರೆ ಮತ್ತು ಕೇಂದ್ರ ಸಚಿವರು ಸೇರಿದಂತೆ ಎನ್‍ಡಿಎಯ ಹಲವು ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ದಾಖಲೆಯ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ನಿತೀಶ್ ನೇತೃತ್ವದ ಸರ್ಕಾರದಲ್ಲಿ ಬಿಜೆಪಿಯಿಂದ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ, ಮಂಗಲ್ ಪಾಂಡೆ ನಿತೀಶ್ ಮಿಶ್ರಾ, ನಿತಿನ್ ನವೀನ್, ರೇಣು ದೇವಿ ನೀರಜ್ ಕುಮಾರ್ ಬಬ್ಲು ಸಂಜಯ್ ಸರವಾಗಿ ರಜನೀಶ್ ಕುಮಾರ್, ಜೆಡಿಯು ಪಕ್ಷದ ವಿಜಯ್ ಕುಮಾರ್ ಚೌಧರಿ, ವಿಜೇಂದ್ರ ಯಾದವ್, ಶ್ರವಣ್ ಕುಮಾರ್, ಅಶೋಕ್ ಚೌಧರಿ, ರತ್ನೇಶ್ ಸದಾ, ಸುನೀಲ್ ಕುಮಾರ್, ಶ್ಯಾಮ್ ರಜಕ್ ಜಮಾ ಖಾನ್ ಲೇಸಿ ಸಿಂಗ್ ದಾಮೋದರ್ ರಾವತ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
ಎಲ್‍ಜೆಪಿ, ಎಚ್‍ಎಎಂ ಮತ್ತು ಆರ್‍ಎಲ್‍ಎಂನಿಂದ ರಾಜು ತಿವಾರಿ (ಲೋಕ ಜನಶಕ್ತಿ ಪಕ್ಷ-ರಾಮ್ ವಿಲಾಸ್)ಸಂತೋಷ್ ಕುಮಾರ್ ಸುಮನ್ (ಹಿಂದೂಸ್ತಾನಿ ಅವಾಮ್ ಮೋರ್ಚಾ) ಸ್ನೇಹಲತಾ ಕುಶ್ವಾಹ (ರಾಷ್ಟ್ರೀಯ ಲೋಕ ಮೋರ್ಚಾ) ಸಚಿವರಾಗುವುದು ಬಹುತೇಕ ಖಚಿತಪಟ್ಟಿದೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…