Mysore
24
broken clouds

Social Media

ಸೋಮವಾರ, 30 ಮಾರ್ಚ್ 2026
Light
Dark

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ.

ಈಗಾಗಲೇ ಈ ಬಗ್ಗೆ ಅನೇಕ ಟೋಲ್‌ ಪ್ಲಾಜಾಗಳಲ್ಲಿ, ಪ್ರಮುಖ ಹೆದ್ದಾರಿಗಳಲ್ಲಿ ಸಾರ್ವಜನಿಕ ಪ್ರಕಟಣೆಯ ಫಲಕಗಳನ್ನು ಹಾಕಲಾಗಿದೆ.

ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಪ್ರಯಾಣವನ್ನು ಸುಗಮಗೊಳಿಸುವ ಉದ್ದೇಶದಿಂದ ಪ್ರಯಾಣಿಕರು ಟೋಲ್‌ಗಳನ್ನು ಪಾವತಿಸಲು ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಅನ್ನು ಬಳಸಬೇಕಾಗುತ್ತದೆ. ಈ ಕ್ರಮವು ದೀರ್ಘ ಸರತಿ ಸಾಲುಗಳನ್ನು ನಿವಾರಿಸುತ್ತದೆ ಮತ್ತು ಪ್ರಯಾಣವನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಮೈಸೂರು-ಬೆಂಗಳೂರು ಹೆದ್ದಾರಿ, ನೆಲಮಂಗಲ-ಹಾಸನ ಹಾಗೂ ಬೆಂಗಳೂರು-ತುಮಕೂರು-ಪುಣೆ ಹೆದ್ದಾರಿಯ ಟೋಲ್ ಪ್ಲಾಜಾಗಳಲ್ಲಿ ಹೊಸ ನಿಯಮದ ಬಗ್ಗೆ ದೊಡ್ಡ ಫಲಕಗಳಲ್ಲಿ ಮಾಹಿತಿ ನೀಡಲಾಗಿದೆ.

ಹೀಗಾಗಿ ವಾಹನ ಸವಾರರು ತಮ್ಮ ಫಾಸ್ಟ್‌ಟ್ಯಾಗ್ ಸಕ್ರಿಯವಾಗಿದೆಯೇ ಮತ್ತು ಅದರಲ್ಲಿ ಪೂರಕ ಬ್ಯಾಲೆನ್ಸ್ ಇದೆಯೇ ಎಂದು ಖಚಿತಪಡಿಸಿಕೊಂಡು ಹೆದ್ದಾರಿಗಿಳಿಯುವುದು ಉತ್ತಮವಾಗಿದೆ.

Tags:
error: Content is protected !!