ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ.
ಈಗಾಗಲೇ ಈ ಬಗ್ಗೆ ಅನೇಕ ಟೋಲ್ ಪ್ಲಾಜಾಗಳಲ್ಲಿ, ಪ್ರಮುಖ ಹೆದ್ದಾರಿಗಳಲ್ಲಿ ಸಾರ್ವಜನಿಕ ಪ್ರಕಟಣೆಯ ಫಲಕಗಳನ್ನು ಹಾಕಲಾಗಿದೆ.
ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಪ್ರಯಾಣವನ್ನು ಸುಗಮಗೊಳಿಸುವ ಉದ್ದೇಶದಿಂದ ಪ್ರಯಾಣಿಕರು ಟೋಲ್‌ಗಳನ್ನು ಪಾವತಿಸಲು ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಅನ್ನು ಬಳಸಬೇಕಾಗುತ್ತದೆ. ಈ ಕ್ರಮವು ದೀರ್ಘ ಸರತಿ ಸಾಲುಗಳನ್ನು ನಿವಾರಿಸುತ್ತದೆ ಮತ್ತು ಪ್ರಯಾಣವನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಮೈಸೂರು-ಬೆಂಗಳೂರು ಹೆದ್ದಾರಿ, ನೆಲಮಂಗಲ-ಹಾಸನ ಹಾಗೂ ಬೆಂಗಳೂರು-ತುಮಕೂರು-ಪುಣೆ ಹೆದ್ದಾರಿಯ ಟೋಲ್ ಪ್ಲಾಜಾಗಳಲ್ಲಿ ಹೊಸ ನಿಯಮದ ಬಗ್ಗೆ ದೊಡ್ಡ ಫಲಕಗಳಲ್ಲಿ ಮಾಹಿತಿ ನೀಡಲಾಗಿದೆ.
ಹೀಗಾಗಿ ವಾಹನ ಸವಾರರು ತಮ್ಮ ಫಾಸ್ಟ್‌ಟ್ಯಾಗ್ ಸಕ್ರಿಯವಾಗಿದೆಯೇ ಮತ್ತು ಅದರಲ್ಲಿ ಪೂರಕ ಬ್ಯಾಲೆನ್ಸ್ ಇದೆಯೇ ಎಂದು ಖಚಿತಪಡಿಸಿಕೊಂಡು ಹೆದ್ದಾರಿಗಿಳಿಯುವುದು ಉತ್ತಮವಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…