ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಜೂನ್ ೨೦ರಂದು ವಿಚಾರಣಾ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣಾ ನ್ಯಾಯಾಲದ ಆದೇಶ ತಡೆಹಿಡಿಯುವಂತೆ ಕೋರಿ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್ ಗೆ ಮನವಿ ಮಾಡಿತ್ತು. ಈ ಮನವಿಯನ್ನು ದೆಹಲಿ ಹೈಕೋರ್ಟ್ ಪುರಸ್ಕರಿಸಿದ್ದು,ಜಾಮೀನು ನೀಡಲು ನಿರಾಕರಿಸಿದೆ. ನ್ಯಾಯಾಧೀಶರಾದ ಸುಧೀರ್ ಕುಮಾರ್ ಜೈನ್ ಅವರ ಪೀಠ, ವಿಚಾರಣಾ ನ್ಯಾಯಾಲಯ ನೀಡಿದ್ದಂತಹ ಜಾಮೀನು ಆದೇಶಕ್ಕೆ ತಡೆ ನೀಡಿದೆ.