ದೇಶ- ವಿದೇಶ

ದೆಹಲಿ ಹೈಕೋರ್ಟ್ ನಿಂದ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನಿರಾಕರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಜೂನ್‌ ೨೦ರಂದು ವಿಚಾರಣಾ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣಾ ನ್ಯಾಯಾಲದ ಆದೇಶ ತಡೆಹಿಡಿಯುವಂತೆ ಕೋರಿ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್ ಗೆ ಮನವಿ ಮಾಡಿತ್ತು. ಈ ಮನವಿಯನ್ನು ದೆಹಲಿ ಹೈಕೋರ್ಟ್ ಪುರಸ್ಕರಿಸಿದ್ದು,ಜಾಮೀನು ನೀಡಲು ನಿರಾಕರಿಸಿದೆ. ನ್ಯಾಯಾಧೀಶರಾದ ಸುಧೀರ್ ಕುಮಾರ್ ಜೈನ್ ಅವರ ಪೀಠ, ವಿಚಾರಣಾ ನ್ಯಾಯಾಲಯ ನೀಡಿದ್ದಂತಹ ಜಾಮೀನು ಆದೇಶಕ್ಕೆ ತಡೆ ನೀಡಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

10 mins ago

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

55 mins ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

2 hours ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

2 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

6 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

6 hours ago