Mysore
19
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಈ ಬಾರಿಯ ಹಜ್‌ ಯಾತ್ರೆಗೆ ಮಕ್ಕಳು ನಿಷೇಧ

ಸೌದಿ ಅರೇಬಿಯಾ: 2025ರಲ್ಲಿ ಹಜ್‌ ಯಾತ್ರೆಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದ್ದು, ಈ ಬಾರಿಯ ಹಜ್‌ ಯಾತ್ರೆಗೆ ಮಕ್ಕಳನ್ನು ನಿಷೇಧಿಸಲಾಗಿದೆ ಎಂದು ಘೋಷಣೆ ಮಾಡಿದೆ.

2025ರ ಜೂನ್‌ನಲ್ಲಿ ಪ್ರಾರಂಭವಾಗುವ ಹಜ್‌ ಯಾತ್ರೆಗೆ ಈಗಾಗಲೇ ನೋಂದಣಿ ಆರಂಭವಾಗಿದೆ. ಈ ಬೆನ್ನಲ್ಲೇ ಸೌದಿ ಅರೇಬಿಯಾ ಸರ್ಕಾರ ಈ ಬಾರಿ ಮಕ್ಕಳನ್ನು ಹಜ್‌ ಯಾತ್ರೆಗೆ ಅನುಮತಿಸುವುದಿಲ್ಲ ಎಂದು ಮಾಹಿತಿ ನೀಡಿದೆ.

ಈ ಯಾತ್ರೆಯ ಸಂದರ್ಭದಲ್ಲಿ ಜನಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಈ ಬಗ್ಗೆ ಮಾತನಾಡಿರುವ ಸಚಿವಾಲಯ ಮಕ್ಕಳನ್ನು ಜನದಟ್ಟಣೆಯ ಅಪಾಯದಿಂದ ರಕ್ಷಿಸಲು ಹಾಗೂ ಯಾತ್ರೆಯ ಅನುಭವವನ್ನು ಮತ್ತಷ್ಟು ಕಡಿಮೆ ಮಾಡಲು ಹಜ್‌ ಯಾತ್ರೆಗೆ ಮಕ್ಕಳನ್ನು ನಿಷೇಧ ಮಾಡಲಾಗಿದೆ. ಅಪಾಯಕಾರಿ ಸನ್ನಿವೇಶಗಳಲ್ಲಿ ಭಾರೀ ಜನಜಂಗುಳಿಯನ್ನು ನಿಯಂತ್ರಿಸಬೇಕಾಗಿದೆ. ಆದ್ದರಿಂದ ಹಜ್‌ ಸಂದರ್ಭದಲ್ಲಿ ಸಣ್ಣ ಮಕ್ಕಳು ಗಂಭೀರ ಅಪಾಯಕ್ಕೊಳಗಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಇದರೊಂದಿಗೆ 2025ರ ಹಜ್‌ ಯಾತ್ರೆ ಕೈಗೊಳ್ಳಲು ಮೊದಲ ಬಾರಿಗೆ ಯಾತ್ರಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ.

 

Tags:
error: Content is protected !!