ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ.
ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ರಾಜ್ಯಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿ, ಅಮೆರಿಕದೊಂದಿಗೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಮತ್ತು ಮಾತುಕತೆ ನಡೆಸುವ ಯೋಜನೆಯೂ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಅಮೆರಿಕ ನೀಡಿದ 15 ಅಂಶಗಳ ಕದನ ವಿರಾಮ ಪ್ರಸ್ತಾಪವನ್ನು ತಿರಸ್ಕರಿಸಿದೆ. ಇರಾನ್ ತನ್ನದೇ ಆದ ಷರತ್ತುಗಳೊಂದಿಗೆ ಪ್ರತಿಪ್ರಸ್ತಾಪ ಸಲ್ಲಿಸಿದೆ ಎಂದು ಹೇಳಿದೆ.
ಅಮೆರಿಕದ ಪ್ರಸ್ತಾಪವನ್ನು ʼಒತ್ತಾಯʼ ಎಂದು ವರ್ಣಿಸಿರುವ ಇರಾನ್ ತನ್ನ ಅಧಿಕಾರಿಗಳ ಹತ್ಯೆ ನಿಲ್ಲಿಸುವುದು, ಯುದ್ಧದ ನಷ್ಟಪರಿಹಾರ, ಹಾರ್ಮುಜ್ ಕಾಲುವೆಯ ಮೇಲಿನ ತನ್ನ ಸಾರ್ವಭೌಮತ್ವ ಮತ್ತು ಭವಿಷ್ಯದಲ್ಲಿ ಯಾವುದೇ ದಾಳಿ ನಡೆಯದಂತೆ ಖಾತರಿ ಒದಗಿಸುವುದು ಸೇರಿದಂತೆ ತನ್ನ ಷರತ್ತುಗಳನ್ನು ಅಮೆರಿಕ ಮುಂದಿಟ್ಟಿದೆ ಎಂದು ತಿಳಿದುಬಂದಿದೆ.
ಅಮೆರಿಕ ಈಗಾಗಲೇ ಪಾಕಿಸ್ತಾನ ಮೂಲಕ ಮಧ್ಯಸ್ಥಿಕೆಯ ಪ್ರಯತ್ನ ಮಾಡುತ್ತಿದ್ದರೂ, ಇರಾನ್ ಅದನ್ನು “ಮಾತುಕತೆ” ಎಂದು ಒಪ್ಪಿಕೊಳ್ಳುತ್ತಿಲ್ಲ. ಮಧ್ಯಸ್ಥಿಕೆಯ ಮೂಲಕ ಬಂದ ಸಂದೇಶಗಳು ಮಾತುಕತೆ ಎಂದು ಅರ್ಥವಲ್ಲ ಎಂದು ವಿದೇಶಾಂಗ ಸಚಿವ ಅರಾಗ್ಚಿ ಸ್ಪಷ್ಟಪಡಿಸಿದ್ದಾರೆ.
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…
ಹೈದರಬಾದ್ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…