ದೇಶ- ವಿದೇಶ

ಪೆಟ್ರೋಲ್, ಡೀಸೆಲ್, ಆಲ್ಕೊಹಾಲ್ ಉತ್ಪನ್ನಗಳಿಗೆ ಜಿಎಸ್‌ಟಿ ಇಲ್ಲ : ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಹೊಸದಿಲ್ಲಿ : ಪೆಟ್ರೋಲ್, ಡೀಸೆಲ್ ಮತ್ತು ಆಲ್ಕೊಹಾಲ್‌ನಂತಹ ಉತ್ಪನ್ನಗಳನ್ನು ಸದ್ಯಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಇದನ್ನು ಖಚಿತಪಡಿಸಿದ್ದು, ಪೆಟ್ರೋಲ್, ಡೀಸೆಲ್ ಮತ್ತು ಆಲ್ಕೊಹಾಲಿಕ್ ಪಾನೀಯಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸದಿರಲು ಕಾರಣವೇನೆಂದು ಪ್ರಶ್ನಿಸಿದಾಗ, ಪ್ರಸ್ತುತ ಯೋಜನೆಯಲ್ಲಿ ತಕ್ಷಣಕ್ಕೆ ಇವುಗಳನ್ನು ಸೇರಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು.

ಪೆಟ್ರೋಲ್, ಡೀಸೆಲ್ ಮತ್ತು ಆಲ್ಕೊಹಾಲ್‌ನಂತಹ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದರಿಂದ ರಾಜ್ಯ ಸರ್ಕಾರಗಳಿಗೆ ಆದಾಯದ ಮೇಲೆ ಗಂಭೀರ ಪರಿಣಾಮ ಬೀರಬಹುದಾದ ಕಾರಣ, ಸದ್ಯಕ್ಕೆ ಈ ಉತ್ಪನ್ನಗಳನ್ನು ಜಿಎಸ್‌ಟಿಯಿಂದ ಹೊರಗಿಡುವ ನಿರ್ಧಾರವನ್ನು ಮುಂದುವರಿಸಲಾಗುವುದು ಎಂದು ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ಆದರೆ, ಭವಿಷ್ಯದಲ್ಲಿ ಈ ವಿಷಯದ ಮೇಲೆ ಚರ್ಚೆ ನಡೆಯುವ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿಲ್ಲ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

1 hour ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

2 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

3 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

4 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

5 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

5 hours ago