ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ.
ಸಮಾಜದ ದುರ್ಬಲ ವರ್ಗದವರಿಗೆ ಸೌಲಭ್ಯಗಳ ಕೊರತೆಯಂತಹ ಮೂಲಭೂತ ಸಮಸ್ಯೆಗಳನ್ನು ನಿರ್ಲಕ್ಷಿಸಿ ಬರೀ ಸರ್ಕಾರ ಹೊಗಳುವುದರಲ್ಲಿಯೇ ತುಂಬಿವೆ ಎಂದಿದ್ದಾರೆ.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಖರ್ಗೆ ಅವರು, ರಾಷ್ಟ್ರಪತಿ ಭಾಷಣವನ್ನು ಸರ್ಕಾರ ರಚಿಸಿದೆ. ಸದನದಲ್ಲಿ ಜೈ ಸಂವಿಧಾನ ಘೋಷಣೆಯೊಂದಿಗೆ ಸಮಸ್ಯೆಗಳನ್ನು ಎದುರಿಸುತ್ತಿರುವ ಸಂಸದರು ಮತ್ತು ಪಕ್ಷಗಳಿವೆ.
ರಾಷ್ಟ್ರಪತಿಗಳ ಜಂಟಿ ಭಾಷಣದಲ್ಲಿ ಯಾವುದೇ ದೂರದೃಷ್ಟಿ ಮತ್ತು ನಿರ್ದೇಶನ ಇಲ್ಲ. ಬಡವರು, ದಲಿತರು ಮತ್ತು ಅಲ್ಪಸಂಖ್ಯಾತರ ಪ್ರಸ್ತಾಪವಿಲ್ಲ ಎಂದು ಕಿಡಿಕಾರಿದರು.
ಪ್ರಧಾನಿ ನರೇಂದ್ರ ಮೋದಿಯನ್ನು ಗುರಿಯಾಗಿಸಿ ಟೀಕಾ ಪ್ರಹಾರ ನಡೆಸಿದ ಖರ್ಗೆ ಅವರು, ವಿಪಕ್ಷಗಳು ಸಾಮಾನ್ಯ ಜನರ ಸಂಕಷ್ಟದ ಬಗ್ಗೆ ಮಾತನಾಡುತ್ತವೆ. ಆದರೆ ಮೋದಿ ಅವರು ಕೇವಲ ಮನ್ ಕಿ ಬಾತ್ ಮಾಡುತ್ತಾರೆ. ಕಳೆದ ಒಂದು ವರ್ಷದಿಂದ ಹೊತ್ತಿ ಉರಿಯುತ್ತಿರುವ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿಲ್ಲ. ಅವರು ಕೇವಲ ಘೋಷಣೆಗಳನ್ನು ನೀಡುವುದರಲ್ಲಿ ನಿಪುಣರು ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿಯ ಚುನಾವಣಾ ಸಮಯದಲ್ಲಿ ತಮ್ಮ ಭಾಷಣಗಳ ಮೂಲಕ ಸಮಾಜ ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಖರ್ಗೆ, ಈ ಹಿಂದೆ ಯಾವ ಪ್ರಧಾನಿಯೂ ಈ ರೀತಿ ಮಾಡಿಲ್ಲ. ಇದಲ್ಲದೇ ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮಗಾಂಧಿ ಮತ್ತು ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಅವುಗಳ ಮೂಲ ಸ್ಥಳಗಳಿಗೆ ಮರುಸ್ಥಾಪಿಸಬೇಕು ಎಂದು ರಾಜ್ಯಸಭಾ ಅಧ್ಯಕ್ಷರನ್ನು ಒತ್ತಾಯಿಸಿದರು.
ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…
ಮಹಾದೇಶ್ ಎಂ ಗೌಡ ಹನೂರು: ಇದು ಶತೋತ್ತರ ದಶಮಾನೋತ್ಸವ ದಾಟಿ ಮುಂದೆ ಸಾಗಿರುವ ಶಾಲೆ. ಕಾಲ ಕಾಲಕ್ಕೆ ಅಭಿವೃದ್ಧಿಗೊಂಡು, ಪ್ರಸ್ತುತ…
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…