ಚೆನ್ನೈ: ದೇಶದ ಈಗಿನ ಜನಸಂಖ್ಯೆ ಆಧರಿಸಿ ಲೋಕಸಭೆ ಕ್ಷೇತ್ರಗಳ ಮರುವಿಂಗಡನೆ ಸಂಸತ್‌ನಲ್ಲಿ ದಕ್ಷಿಣ ರಾಜ್ಯಗಳ ಪ್ರಾತಿನಿಧ್ಯವನ್ನು ಕಡಿಮೆ ಮಾಡುತ್ತದೆ. ನಾವು ಒಟ್ಟಾಗಿ ಇದನ್ನು ವಿರೋಧಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.
ಚೆನ್ನೈನಲ್ಲಿ ನಡೆದ ಮರುವಿಂಗಡನೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಈಗಿನ ಜನಸಂಖ್ಯಾ ಆಧಾರದ ಮೇಲೆ ಕ್ಷೇತ್ರ ಮರುವಿಂಗಡನೆಯಿಂದ ನಮ್ಮ ಪ್ರಾತಿನಿಧ್ಯ ಕಡಿಮೆಯಾಗುತ್ತದೆ. ಇದರಿಂದ ರಾಜ್ಯಗಳ ಅನುದಾನ ಪಡೆಯಲು ಹೋರಾಟ ಮಾಡಬೇಕು. ನಮ್ಮ ಅಭಿಪ್ರಾಯ ಪಡೆಯದೆ ಕಾನೂನುಗಳನ್ನು ರೂಪಿಸಲಾಗುತ್ತದೆ. ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ ಬೀರಲಿದೆ. ನಾಗರೀಕರು ತಮ್ಮ ದೇಶದಲ್ಲೇ ರಾಜಕೀಯ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಹೇಳಿದರು.
ಪ್ರಜಸತ್ತಾತ್ಮಕ ಪ್ರಾತಿನಿಧ್ಯವನ್ನು ಬಲಪಡಿಸುವ ಯಾವುದನ್ನೂ ನಾವು ವಿರೋಧಿಸುವುದಿಲ್ಲ. ಆ ಪ್ರಕ್ರಿಯೆ ಮುಕ್ತವಾಗಿರಬೇಕು. ಇದು ಮರುವಿಂಗಡನೆಯ ವಿರುದ್ಧದ ಹೋರಾಟವಲ್ಲ. ನ್ಯಾಯಯುತ ಮರುವಿಂಗಡಣೆಗೆ ನಮ್ಮ ಆಗ್ರಹ ಎಂದರು.
ಈ ಸಭೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ, ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್, ಬಿ.ಆರ್.ಎಸ್ ಪಕ್ಷದ ನಾಯಕ ಕೆ.ಟಿ ರಾಮರಾವ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…