Mysore
28
light rain

Social Media

ಗುರುವಾರ, 11 ಜೂನ್ 2026
Light
Dark

ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯ ಚಿಂತನೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ 25-28ರೂ ಏರಿಕೆಯಾಗುವ ಸಾಧ್ಯತೆ ಇದೆ ಎಂಬ ವರದಿಗಳನ್ನು ಸರ್ಕಾರ ತಳ್ಳಿಹಾಕಿದ್ದು, ಅಂತಹ ಯಾವುದೇ ದರ ಏರಿಕೆ ಬಗ್ಗೆ ಚಿಂತನೆ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು, ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೆಲವು ಸುದ್ದಿಗಳು ಹರಿದಾಡುತ್ತಿವೆ. ಅಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಪರಿಗಣನೆಯಲ್ಲಿಲ್ಲ. ಇಂತಹ ಸುದ್ದಿಗಳು ನಾಗರಿಕಲ್ಲಿ ಭಯ ಹುಟ್ಟಿಸಲು ಮಾಡಲಾಗಿದೆ. ಇವು ದುರುದ್ದೇಶ ಹಾಗೂ ದಾರಿತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ತಿಳಿಸಿದೆ.

 

Tags:
error: Content is protected !!