ನವದೆಹಲಿ: ಟಾಟಾ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ.
ಇಂದು ಟಾಟಾ ಟ್ರಸ್ಟ್‌ಗಳ ಮಂಡಳಿ ಸಭೆ ನಡೆಸಲಾಗಿದ್ದು, ಸರ್ವಾನುಮತದಿಂದ ನೋಯೆಲ್ ಟಾಟಾ ಅವರನ್ನು ಟಾಟಾ ಟ್ರಸ್ಟ್‌ನ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ನೋಯೆಲ್ ಟಾಟಾ ಅವರು ರತನ್ ಟಾಟಾ ಅವರ ಮಲ ಸೋದರ. ಈಗಾಗಲೇ ಅವರು ರತನ್ ಟಾಟಾ ಟ್ರಸ್ಟ್ ಮತ್ತು ಸರ್ ದೊರಾಬ್ಜಿ ಟಾಟಾ ಟ್ರಸ್ಟ್‌ನ ಮಂಡಳಿಯಲ್ಲಿ ಟ್ರಸ್ಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇದೆಲ್ಲದರ ಜೊತೆಗೆ ಟಾಟಾ ಟ್ರೆಂಟ್‌ನ ಅಧ್ಯಕ್ಷರು ಹಾಗೂ ಟಾಟಾ ಸ್ಟೀಲ್‌ನ ಉಪಾಧ್ಯಕ್ಷರೂ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





