ದೇಶ- ವಿದೇಶ

ನಾರ್ವೆ | ರನ್‌ವೇ ಬಿಟ್ಟು ಬದಿಗೆ ಜಾರಿದ ವಿಮಾನ; ಪ್ರಯಾಣಿಕರು ಪಾರು

ಆಮ್‌ಸ್ಟರ್‌ಡ್ಯಾಮ್‌: ತುರ್ತು ಭೂಸ್ಪರ್ಶ ಮಾಡಿದ್ದ ವಿಮಾನವೊಂದು ರನ್‌ ವೇ ಬಿಟ್ಟು ಪಕ್ಕದ ಹುಲ್ಲಿನ ಹಾಸಿನ ಬದಿಗೆ ಜಾರಿದ ಘಟನೆ ನಾರ್ವೆಯ ಓಸ್ಲೋ ವಿಮಾನ ನಿಲ್ದಾಣದಲ್ಲಿ ಶನಿವಾರ ನಡೆದಿದೆ. ಅದೃಷ್ಟವಶಾತ್‌ ವಿಮಾನದಲ್ಲಿದ್ದ 182 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಓಸ್ಲೋ ವಿಮಾನ ನಿಲ್ದಾಣದಿಂದ ಆಮ್‌ಸ್ಟರ್‌ಡ್ಯಾಮ್‌ಗೆ ಹೊರಟಿದ್ದ ಬೋಯಿಂಗ್‌ 737ವಿಮಾನದಲ್ಲಿ ಟೇಕಾಫ್‌ ಆದ ಕೆಲವೇ ಕ್ಷಣದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಎಚ್ಚೆತ್ತ ಸಿಬ್ಬಂದಿ ಓಸ್ಲೋ ಟಾರ್ಪ್‌ ಸ್ಯಾಂಡೆಫ್ಜೋರ್ಡ್‌ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ಲ್ಯಾಂಡಿಂಗ್‌ ಆಗಿ ರನ್‌ವೇ ನಲ್ಲಿ ಸಾಗುವ ವೇಳೆ ನಿಯಂತ್ರಣ ಕಳೆದುಕೊಂಡು ಕೊನೆಗೆ ಪಕ್ಕದಲ್ಲಿರುವ ಹುಲ್ಲು ಹಾಸಿನ ಮೇಲೆ ನಿಂತಿತ್ತು. ಈ ವಿಮಾನದಲ್ಲಿ ಸಿಬ್ಬಂದಿ ಮತ್ತು ಪ್ರಯಾಣಿಕರು ಸೇರಿ ಒಟ್ಟು 182 ಮಂದಿ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಅವಘಡದ ಬಗ್ಗೆ ವಿಮಾನಯಾನ ಸಂಸ್ಥೆ ಕೆಎಲ್‌ಎಂ ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

1 hour ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

1 hour ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 hour ago

ಸಚಿವ ಡಾ.ಜಿ.ಪರಮೇಶ್ವರ್‌ ಬೆಟ್ಟಿಂಗ್‌ ಕೇಸ್‌ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್‌ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್…

1 hour ago

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು,…

1 hour ago

ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ಬಾಲಕಿ…!

ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…

2 hours ago