ಆಮ್‌ಸ್ಟರ್‌ಡ್ಯಾಮ್: ತುರ್ತು ಭೂಸ್ಪರ್ಶ ಮಾಡಿದ್ದ ವಿಮಾನವೊಂದು ರನ್ ವೇ ಬಿಟ್ಟು ಪಕ್ಕದ ಹುಲ್ಲಿನ ಹಾಸಿನ ಬದಿಗೆ ಜಾರಿದ ಘಟನೆ ನಾರ್ವೆಯ ಓಸ್ಲೋ ವಿಮಾನ ನಿಲ್ದಾಣದಲ್ಲಿ ಶನಿವಾರ ನಡೆದಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ 182 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಓಸ್ಲೋ ವಿಮಾನ ನಿಲ್ದಾಣದಿಂದ ಆಮ್‌ಸ್ಟರ್‌ಡ್ಯಾಮ್‌ಗೆ ಹೊರಟಿದ್ದ ಬೋಯಿಂಗ್ 737ವಿಮಾನದಲ್ಲಿ ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಎಚ್ಚೆತ್ತ ಸಿಬ್ಬಂದಿ ಓಸ್ಲೋ ಟಾರ್ಪ್ ಸ್ಯಾಂಡೆಫ್ಜೋರ್ಡ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನ ಲ್ಯಾಂಡಿಂಗ್ ಆಗಿ ರನ್‌ವೇ ನಲ್ಲಿ ಸಾಗುವ ವೇಳೆ ನಿಯಂತ್ರಣ ಕಳೆದುಕೊಂಡು ಕೊನೆಗೆ ಪಕ್ಕದಲ್ಲಿರುವ ಹುಲ್ಲು ಹಾಸಿನ ಮೇಲೆ ನಿಂತಿತ್ತು. ಈ ವಿಮಾನದಲ್ಲಿ ಸಿಬ್ಬಂದಿ ಮತ್ತು ಪ್ರಯಾಣಿಕರು ಸೇರಿ ಒಟ್ಟು 182 ಮಂದಿ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಈ ಅವಘಡದ ಬಗ್ಗೆ ವಿಮಾನಯಾನ ಸಂಸ್ಥೆ ಕೆಎಲ್‌ಎಂ ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…