Mysore
22
haze

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಮೂವರು ಬಾಲಿವುಡ್‌ ನಟರಿಗೆ ನೋಟಿಸ್:‌ ಕಾರಣ ಇಷ್ಟೇ

ಜೈಪುರ: ಕಣ ಕಣದಲ್ಲೂ ಕೇಸರಿ ಎಂದ ಮೂವರು ಬಾಲಿವುಡ್‌ ಸ್ಟಾರ್‌ ನಟರಿಗೆ ಜೈಪುರ ಜಿಲ್ಲಾ ಗ್ರಾಹಕರ ಆಯೋಗ ಸಂಖ್ಯೆ-2 ನೋಟಿಸ್‌ ಜಾರಿ ಮಾಡಿದೆ.

ಈ ಮೂಲಕ ಗುಟ್ಕಾ ಜಾಹೀರಾತು ನೀಡುತ್ತಿದ್ದ ಬಾಲಿವುಡ್‌ ನಟರಾದ ಶಾರುಖ್‌ ಖಾನ್‌, ಅಜಯ್‌ ದೇವಗನ್‌ ಮತ್ತು ಟೈಗರ್‌ ಶ್ರಾಫ್‌ಗೆ ತೀವ್ರ ಸಂಕಷ್ಟ ಎದುರಾಗಿದೆ.

ಈ ಮೂವರು ನಟರ ಜೊತೆಗೆ ಗುಟ್ಕಾ ತಯಾರಿಕಾ ಕಂಪನಿಗೂ ಕೂಡ ನೋಟಿಸ್‌ ನೀಡಿದ್ದು, ಎಲ್ಲರೂ ಇದೇ ಮಾರ್ಚ್.‌19ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಮೂವರು ಬಾಲಿವುಡ್‌ ನಟರು ಗುಟ್ಕಾ ಬ್ರ್ಯಾಂಡ್‌ ಪ್ರಚಾರ ಮಾಡುತ್ತಿದ್ದು, ಗ್ರಾಹಕರನ್ನು ಖರೀದಿಸುವಂತೆ ಆಕರ್ಷಿಸುತ್ತಿದ್ದಾರೆ.

ಗುಟ್ಕಾ ಉತ್ಪನ್ನವು ಆರೋಗ್ಯಕ್ಕೆ ಹಾನಿಕಾರಕವಾಗಿದ್ದರೂ ಅದರಲ್ಲಿ ಕೇಸರಿ ಇದೆ ಎಂದು ದಾರಿ ತಪ್ಪಿಸುತ್ತಿದ್ದಾರೆ ಎಂದು ಜೈಪುರ ನಿವಾಸಿ ಯೋಗೇಂದ್ರ ಸಿಂಗ್‌ ಬಡಿಯಾಲ್‌ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ನೀಡಿದ್ದು, ದೂರಿನ ಅನ್ವಯ ನೋಟಿಸ್‌ ಜಾರಿ ಮಾಡಲಾಗಿದೆ.

 

Tags:
error: Content is protected !!