ಜೈಪುರ: ಕಣ ಕಣದಲ್ಲೂ ಕೇಸರಿ ಎಂದ ಮೂವರು ಬಾಲಿವುಡ್ ಸ್ಟಾರ್ ನಟರಿಗೆ ಜೈಪುರ ಜಿಲ್ಲಾ ಗ್ರಾಹಕರ ಆಯೋಗ ಸಂಖ್ಯೆ-2 ನೋಟಿಸ್ ಜಾರಿ ಮಾಡಿದೆ.
ಈ ಮೂಲಕ ಗುಟ್ಕಾ ಜಾಹೀರಾತು ನೀಡುತ್ತಿದ್ದ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ತೀವ್ರ ಸಂಕಷ್ಟ ಎದುರಾಗಿದೆ.
ಈ ಮೂವರು ನಟರ ಜೊತೆಗೆ ಗುಟ್ಕಾ ತಯಾರಿಕಾ ಕಂಪನಿಗೂ ಕೂಡ ನೋಟಿಸ್ ನೀಡಿದ್ದು, ಎಲ್ಲರೂ ಇದೇ ಮಾರ್ಚ್.19ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಮೂವರು ಬಾಲಿವುಡ್ ನಟರು ಗುಟ್ಕಾ ಬ್ರ್ಯಾಂಡ್ ಪ್ರಚಾರ ಮಾಡುತ್ತಿದ್ದು, ಗ್ರಾಹಕರನ್ನು ಖರೀದಿಸುವಂತೆ ಆಕರ್ಷಿಸುತ್ತಿದ್ದಾರೆ.
ಗುಟ್ಕಾ ಉತ್ಪನ್ನವು ಆರೋಗ್ಯಕ್ಕೆ ಹಾನಿಕಾರಕವಾಗಿದ್ದರೂ ಅದರಲ್ಲಿ ಕೇಸರಿ ಇದೆ ಎಂದು ದಾರಿ ತಪ್ಪಿಸುತ್ತಿದ್ದಾರೆ ಎಂದು ಜೈಪುರ ನಿವಾಸಿ ಯೋಗೇಂದ್ರ ಸಿಂಗ್ ಬಡಿಯಾಲ್ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ನೀಡಿದ್ದು, ದೂರಿನ ಅನ್ವಯ ನೋಟಿಸ್ ಜಾರಿ ಮಾಡಲಾಗಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…