Mysore
20
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.

ಐಎಎಸ್, ಐಪಿಎಸ್, ಐಎಫ್‌ಎಸ್‌ನಂತಹ ದೇಶದ ಅತ್ಯುನ್ನತ ಶ್ರೇಣಿಯ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ಅಂದರೆ 2026ನೇ ಸಾಲಿನ ಗ್ರೂಪ್ ಎ ಮತ್ತು ಬಿ ಯ ನಾಗರಿಕ ಸೇವಾ ಪರೀಕ್ಷೆ ಮತ್ತು ಭಾರತೀಯ ಅರಣ್ಯ ಸೇವಾ ಪರೀಕ್ಷೆ(ಐಎಫ್‌ಎಸ್) ಹುದ್ದೆಗಳಿಗೆ ಅಧಿಸೂಚನೆ ಇದಾಗಿದ್ದು, ಈ ಕುರಿತ ಮಾಹಿತಿ ಇಲ್ಲಿದೆ.

ನಾಗರಿಕ ಸೇವಾ ಪರೀಕ್ಷೆಯಲ್ಲಿ ಕೆಲವೊಂದು ಪ್ರಮುಖ ಬದಲಾವಣೆ ಮಾಡಲಾಗಿದೆ. ಕೇಂದ್ರ ನಾಗರಿಕ ಸೇವಾ ಆಯೋಗ-ಯುಪಿಎಸ್‌ಸಿ, ಹೊಸ ನಿಯಮಗಳನ್ನು ಪರಿಚಯಿಸಿದೆ. ಈಗಾಗಲೇ ಐಎಎಸ್ ಮತ್ತು ಐಎಫ್‌ಎಸ್‌ನಂತಹ ಉನ್ನತ ನಾಗರಿಕ ಸೇವೆಗಳಿಗೆ ನೇಮಕಗೊಂಡ ಅಭ್ಯರ್ಥಿಗಳು ನಾಗರಿಕ ಸೇವಾ ಪರೀಕ್ಷೆಯಲ್ಲಿ ಮತ್ತೆ ಕಾಣಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಹುದ್ದೆಗಳ ವಿವರ:
ಕೇಂದ್ರ ನಾಗರಿಕ ಸೇವಾ ಪರೀಕ್ಷೆ – 933 ಹುದ್ದೆಗಳು
ಭಾರತೀಯ ಅರಣ್ಯ ಸೇವಾ ಪರೀಕ್ಷೆ – 80 ಹುದ್ದೆಗಳು

ವಿದ್ಯಾರ್ಹತೆ
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು. ಅರಣ್ಯ ಸೇವೆ ಪರೀಕ್ಷೆ ತೆಗೆದುಕೊಳ್ಳಲು ಬಯಸುವ ಅಭ್ಯರ್ಥಿ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ವಿಜ್ಞಾನ, ಸಸ್ಯಶಾಸ್ತ್ರ, ರಸಾಯನಶಾಸ್ತ್ರ, ಭೂವಿಜ್ಞಾನ, ಗಣಿತ, ಭೌತಶಾಸ್ತ್ರ, ಕೃಷಿ ಪದವಿ, ಅರಣ್ಯಶಾಸ್ತ್ರ ಪದವಿಯಲ್ಲಿ ಒಂದು ವಿಷಯವಾಗಿ ಅಭ್ಯಾಸ ಮಾಡಿರಬೇಕು.

ವಯೋಮಿತಿ
ಕನಿಷ್ಠ 21 ವರ್ಷ, ಗರಿಷ್ಟ 32 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಯದ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಕೆ, ಶುಲ್ಕ
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಮಹಿಳಾ, ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ. ಇತರ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ.

ಫೆ.4ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ
ಫೆ.24 ಅರ್ಜಿ ಸಲ್ಲಿಕೆಗೆ ಕೊನೆಯ ದಿನ
ಮೇ24 ರಂದು ಪರೀಕ್ಷೆ

ಯುಪಿಎಸ್‌ಸಿ ಹೊಸ ನಿಯಮಗಳು
* ಹಿಂದಿನ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಐಎಎಸ್- ಐಎಫ್‌ಎಸ್‌ಗೆ ನೇಮಕಗೊಂಡವರು 2026ರ ಪರೀಕ್ಷೆಗೆ ಅರ್ಹರಾಗಿರುವುದಿಲ್ಲ
* ಹಿಂದಿನ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಐಪಿಎಸ್‌ಗೆ ಆಯ್ಕೆಯಾದ ಅಥವಾ ನೇಮಕಗೊಂಡ ಅಭ್ಯರ್ಥಿಯು ಸಿಎಸ್‌ಇಫ್ 2026 ರ ಫಲಿತಾಂಶದ ಆಧಾರದ ಮೇಲೆ ಭಾರತೀಯ ಪೊಲೀಸ್ ಸೇವೆಯನ್ನು ಆಯ್ಕೆ ಮಾಡಲು ಅಥವಾ ಹಂಚಿಕೆ ಮಾಡಲು ಅರ್ಹರಾಗಿರುವುದಿಲ್ಲ.
* ಈ ಷರತ್ತು ಪೂರೈಸಿದರೆ ಮಾತ್ರ ಮರು ಪರೀಕ್ಷೆಗೆ ಅವಕಾಶ: ಯುಪಿಎಸ್‌ಸಿಯ ಸಿಎಸ್‌ಇ-2026 ಮೂಲಕ ಐಪಿಎಸ್ ಅಥವಾ ಕೇಂದ್ರ ಸೇವೆಗಳ ಗುಂಪು ‘ಎ’ ಹುದ್ದೆಗೆ ಹಂಚಿಕೆಯಾದ ಅಭ್ಯರ್ಥಿಗಳಿಗೆ ಕೆಲವು ಸಡಿಲಿಕೆಗಳನ್ನು ನೀಡಿದೆ. ಅಂತಹ ಅಭ್ಯರ್ಥಿಗಳು ಅರ್ಹತಾ ಷರತ್ತುಗಳನ್ನು ಪೂರೈಸಿದರೆ ಮತ್ತು ಸಂಬಂಧಪಟ್ಟ ಪ್ರಾಧಿಕಾರದಿಂದ ತರಬೇತಿಗೆ ಸೇರುವುದರಿಂದ ವಿನಾಯಿತಿ ಪಡೆದರೆ, 2027ರ ನಾಗರಿಕ ಸೇವೆಗಳ ಪರೀಕ್ಷೆಗೆ ಹಾಜರಾಗಲು ಅವರಿಗೆ ಅವಕಾಶ ನೀಡಲಾಗುವುದು.

Tags:
error: Content is protected !!