ದೇಶ- ವಿದೇಶ

ನವೆಂಬರ್.‌19 ಅಥವಾ 20ರಂದು ಬಿಹಾರದಲ್ಲಿ ಅಧಿಕೃತ ಸರ್ಕಾರ ರಚನೆ

ಪಾಟ್ನಾ: ಪ್ರಚಂಡ ಬಹುಮತ ಪಡೆದು ಪ್ರತಿಪಕ್ಷಗಳನ್ನು ಧೂಳೀಪಟ ಮಾಡಿ ಅಧಿಕಾರಕ್ಕೆ ಬಂದಿರುವ ಎನ್‍ಡಿಎ ಬಿಹಾರದಲ್ಲಿ ನವೆಂಬರ್.19 ಇಲ್ಲವೇ 20ರಂದು ಅಧಿಕೃತವಾಗಿ ಸರ್ಕಾರ ರಚನೆ ಮಾಡಲಿದೆ. ‌

ಪ್ರಧಾನಿ ನರೇಂದ್ರ ಮೋದಿ ಅವರ ಅಂತಿಮ ವೇಳಾಪಟ್ಟಿಯನ್ನು ಅವಲಂಬಿಸಿ, ನವೆಂಬರ್ 19 ಅಥವಾ 20 ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ನಿರೀಕ್ಷೆಯಿದೆ. ಪಾಟ್ನಾ ಗಾಂಧಿ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಈ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆಯಿದೆ.

ಚುನಾವಣಾ ಆಯೋಗವು 18ನೇ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಸಲ್ಲಿಸಿದೆ. ಇದರ ನಂತರ, ಹೊಸ ವಿಧಾನಸಭೆಯನ್ನು ರಚಿಸುವ ಅಧಿಸೂಚನೆ ಹೊರಡಿಸಲಾಗುವುದು. ಇದರೊಂದಿಗೆ, ಮಾದರಿ ನೀತಿ ಸಂಹಿತೆಯೂ ಅಧಿಕೃತವಾಗಿ ಅಂತ್ಯಗೊಳ್ಳಲಿದೆ.

ನಿತೀಶ್‍ಕುಮಾರ್ ರಾಜೀನಾಮೆ ನೀಡಿದ ನಂತರ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ಎಲ್ಲಾ ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದು, ಬಳಿಕ ಮತ್ತೊಮ್ಮೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಇದನ್ನು ಓದಿ: ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು: ಸಂಸದ ಯದುವೀರ್‌ ಸಂತಸ

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಸಂಪುಟ ಸಭೆ ಕರೆದಿದ್ದು, ಹಾಲಿ 17ನೇ ವಿಧಾನಸಭೆಯನ್ನು ವಿಸರ್ಜಿಸಲು ಅನುಮೋದನೆ ಪಡೆಯಲಿದ್ದಾರೆ. ಬಳಿಕ ಅವರು ರಾಜಭವನಕ್ಕೆ ಭೇಟಿ ನೀಡಿ ತಮ್ಮ ರಾಜೀನಾಮೆಯನ್ನು ಸಲ್ಲಿಸುವ ನಿರೀಕ್ಷೆಯಿದೆ.

ಅವರು ಅಧಿಕಾರದಿಂದ ಕೆಳಗಿಳಿದ ನಂತರ, ಎನ್‍ಡಿಎ ಪಕ್ಷಗಳು ತಮ್ಮ ಶಾಸಕಾಂಗ ಪಕ್ಷದ ಸಭೆಗಳನ್ನು ನಡೆಸಿ, ಮೈತ್ರಿಕೂಟದ ಮುಂದಿನ ನಾಯಕನನ್ನು ಆಯ್ಕೆ ಮಾಡಲಿವೆ. ನಂತರ, ಆಯ್ಕೆಯಾದ ನಾಯಕ ರಾಜ್ಯಪಾಲರ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಈ ನಡುವೆ, 18ನೇ ಬಿಹಾರ ವಿಧಾನಸಭೆಯಲ್ಲಿ ಎನ್‌ಡಿಎ ಸ್ಪಷ್ಟ ಬಹುಮತ ಗಳಿಸಿದೆ. ಬಿಜೆಪಿ 89 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಿತೀಶ್ ಕುಮಾರ್ ಅವರ ಜನತಾ ದಳ 85 ಸ್ಥಾನಗಳನ್ನು ಪಡೆದು ಎರಡನೇ ಸ್ಥಾನದಲ್ಲಿದೆ. ಎಲ್‍ಜೆಪಿ 19 ಸ್ಥಾನ, ಎಚ್.ಎ.ಎಂ 5 ಸ್ಥಾನ, ಮತ್ತು ರಾಷ್ಟ್ರೀಯ ಲೋಕ ಮೋರ್ಚಾ 4 ಸ್ಥಾನಗಳನ್ನು ಗೆದ್ದಿವೆ. ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಮಾತ್ರ ಪಡೆಯಲು ಶಕ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಂತಿಮ ವೇಳಾಪಟ್ಟಿಯನ್ನು ಅವಲಂಬಿಸಿ, ನವೆಂಬರ್ 19 ಅಥವಾ 20 ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

6 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

6 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

6 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

6 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

7 hours ago