ನವದೆಹಲಿ: ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಸ್ಪೀಕರ್ ಆಗಿ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಂಟು ಬಾರಿ ಕೇರಳದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ ಮರು ಆಯ್ಕೆಗೊಂಡಿದ್ದಾರೆ.
ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್ಷ ಸ್ಥಾನಕ್ಕೆ ಇಂದು ಸ್ಪರ್ಧೆ ನಡೆಯಿತು.
ಓಂ ಬಿರ್ಲಾ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಹಂಗಾಮಿ ಸ್ಪೀಕರ್ ಅವರು ಧ್ವನಿ ಮತದ ಮೂಲಕ ಸಂಸದರ ಮತಗಳನ್ನು ಅಂಗೀಕರಿಸಿದರು.
ಓಂ ಬಿರ್ಲಾ ಅವರು ಎನ್‌ಡಿಎ ಸರ್ಕಾರದಲ್ಲಿ ಎರಡನೇ ಬಾರಿಗೆ ಲೋಕಸಭಾಧ್ಯಕ್ಷರಾಗಿದ್ದು, ಅವರನ್ನು ಸ್ಪೀಕರ್ ಕುರ್ಚಿ ಬಳಿ ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕರೆದುಕೊಂಡು ಬಂದು ಗೌರವಿಸಿದರು. ಎರಡನೇ ಅವಧಿಗೆ ನೀವು ಲೋಕಸಭಾಧ್ಯಕ್ಷರಾಗಿ ಆಯ್ಕೆಯಾಗುತ್ತಿರುವುದು ಸದನಕ್ಕೆ ಗೌರವವಾಗಿದೆ ಎಂದು ಪ್ರಧಾನಿ ಮೋದಿ ಖುಷಿಪಟ್ಟರು.
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್,…