ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಓಮರ್ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ.
ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಕಾಂಗ್ರೆಸ್ ಮೈತ್ರಿಕೂಟ ಜಯಗಳಿಸಿದೆ. ಈ ಬೆನ್ನಲ್ಲೇ ಕಾಶ್ಮೀರದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಅವರು, ಓಮರ್ ಅಬ್ದುಲ್ಲಾ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದ್ದಾರೆ.
ಓಮರ್ ಅಬ್ದುಲ್ಲಾ ಅವರು ಬುದ್ಗಾಮ್ ಮತ್ತು ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.
90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯು ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್.1ರಂದು ನಡೆದಿತ್ತು.