ಅಹಮದಾಬಾದ್ : ಅಹಮದಾಬಾದ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಏರ್ ಇಂಡಿಯಾದ AI-171 ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್.ಮಲಿಕ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ರಮೇಶ್ ವಿಶ್ವಾಸ್ ಕುಮಾರ್ ಬುಚರ್ವಾಡಾ ಬದುಕುಳಿದ ಪ್ರಯಾಣಿಕ ಎನ್ನಲಾಗಿದೆ. ಇವರು 11A ಸೀಟಿನಲ್ಲಿ ಕುಳಿತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಮೇಶ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.





