Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಒಂದು ರಾಷ್ಟ್ರ, ಒಂದು ಚುನಾವಣೆ ಸನ್ನಿಹಿತ ಪಕ್ಕಾ.?

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಸನ್ನಿಹಿತ ಪಕ್ಕಾ ಎನ್ನಲಾಗುತ್ತಿದ್ದು, ಈ ಅಧಿವೇಶನದಲ್ಲೇ ಮಸೂದೆ ಮಂಡನೆಗೆ ಪ್ಲಾನ್‌ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಈ ಅಧಿವೇಶನದಲ್ಲೇ ಮಂಡಿಸುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿದ್ದು, ಈ ಬಗ್ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಒಂದು ದೇಶ, ಒಂದು ಚುನಾವಣೆ ಕುರಿತ ರಾಮನಾಥ್‌ ಕೋವಿಂದ್‌ ಸಮಿತಿಯ ವರದಿಗೆ ಸಂಪುಟ ಈಗಾಗಲೇ ಅನುಮೋದನೆ ನೀಡಿದೆ.

ಈ ಮಸೂದೆಯ ಬಗ್ಗೆ ವಿವರವಾದ ಚರ್ಚೆಗಾಗಿ ಜಂಟಿ ಸಂಸದೀಯ ಸಮಿತಿಗೆ ಕಳುಹಿಸುವ ಸಾಧ್ಯತೆಗಳಿಗೆ ಎನ್ನಲಾಗಿದೆ.

ಜಂಟಿ ಸಂಸದೀಯ ಸಮಿತಿ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಿದೆ. ಈ ಪ್ರಕ್ರಿಯೆಯಲ್ಲಿ ದೇಶದಾದ್ಯಂತ ಇರುವ ಬುದ್ಧಿಜೀವಿಗಳು, ರಾಜಕೀತ ತಜ್ಞರು ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭಾ ಸ್ಪೀಕರ್‌ಗಳನು ಚರ್ಚಗೆ ಕರೆಯಲಿದೆ. ಇನ್ನು ಸಾಮಾನ್ಯ ಜನರ ಅಭಿಪ್ರಾಯಗಳನ್ನು ಸಹ ಸಮಿತಿ ಸಂಗ್ರಹಿಸಲಿದೆ ಎಂದು ಹೇಳಲಾಗುತ್ತಿದೆ.

 

Tags: