ನವದೆಹಲಿ: ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ಅನುಮೋದನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಅಂಗೀಕಾರವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ ಎನ್ನಲಾಗಿದೆ.
ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಬಿಜೆಪಿ, ಇದೊಂದು ಐತಿಹಾಸಿಕ ಪರಿಕಲ್ಪನೆ ಎಂದು ಬಣ್ಣನೆ ನೀಡಿದೆ.
ಈ ಕ್ರಮದಿಂದ ಚುನಾವಣಾ ವೆಚ್ಚ ಹಾಗೂ ಆಡಳಿತ ಸ್ನೇಹಿಯಾಗಿದೆ ಎಂದು ಹೇಳಿಕೊಂಡಿದೆ.
ಇನ್ನು ಪ್ರಧಾನಿ ನರೇಂದ್ರ ಮೋದಿಯವರು, ಇದುವರೆಗೂ ಅನೇಕ ಸ್ಥಳಗಳಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದು, ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಈ ಮಸೂದೆ ಮಂಡನೆಯಾಗುವ ಎಲ್ಲಾ ಸಾಧ್ಯತೆಗಳು ಇವೆ ಎನ್ನಲಾಗಿದೆ.
ರಾಜ್ಯದ ವಿಧಾನಸಭೆಗಳು, ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಈ ಮಸೂದೆ ಅಂಗೀಕರಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸುಗಳನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದೆ.