Mysore
27
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಲೋಕಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ

ನವದೆಹಲಿ: ಲೋಕಸಭಾ ಚುನಾವಣೆ ವೇಳೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ “ಒಂದು ದೇಶ ಒಂದು ಚುನಾವಣೆʼ ಮಸೂದೆ”ಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಯಿತು.

ಲೋಕಸಭೆ ಕಲಾಪದಲ್ಲಿಂದು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು, ಸಂವಿಧಾನ(121ನೇ ತಿದ್ದುಪಡಿ) ಮಸೂದೆ, ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ ಮಸೂದೆ 2024ನ್ನು ಮಂಡಿಸಿದರು. ಈ ಮಸೂದೆಗೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾದ ಕಾರಣ ಇನ್ನಷ್ಟು ಅಧ್ಯಯನ ಮಾಡಲು ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಶಿಫಾರಸ್ಸು ಮಾಡಲಾಯಿತು.

ಸಂಸತ್‌ನಲ್ಲಿ ಮಸೂದೆ ಮಂಡನೆಯಾಗುತ್ತಿದ್ದಂತೆ ಇಂಡಿಯಾ ಒಕ್ಕೂಟದ ಸದಸ್ಯರು ಭಾರೀ ವಿರೋಧ ವ್ಯಕ್ತಪಡಿಸಿ, ಎನ್‌ಡಿಎ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಂಸದ ಮನೀಶ್‌ ತಿವಾರಿ, ಈ ಮಸೂದೆಯೂ ಭಾರತದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತದೆ. ಕೇಂದ್ರ ಹಾಗೂ ರಾಜ್ಯಗಳನ್ನು ಏಕಕಾಲದಲ್ಲಿ ಒಟ್ಟಿಗೆ ಮಾಡಲು ಹೇಗೆ ಸಾಧ್ಯ? ಇದು ರಾಜ್ಯದ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಎಂದು ಕಿಡಿಕಾರಿದರು.

ಇನ್ನು ಎಸ್‌ಪಿ ಸಂಸದ ಧರ್ಮೇಂದ್ರ ಯಾದವ್‌ ಕೂಡ ವಿರೋಧಿಸಿ, ಎಂಟು ವಿಧಾನಸಭೆ ಕ್ಷೇತ್ರಗಳ ವಿಧಾನಸಭೆ ಚುನಾವಣೆಯನ್ನು ಒಟ್ಟಿಗೆ ಮಾಡಲು ನಿಮಗೆ ಸಾಧ್ಯವಾಗಲಿಲ್ಲ. ಈಗ ಇಡೀ ದೇಶದಲ್ಲಿ ಚುನಾವಣೆಯನ್ನು ಒಟ್ಟಿಗೆ ಮಾಡುತ್ತೇವೆ ಎಂದು ಹೇಳುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಪಕ್ಷಗಳ ಆರೋಪಕ್ಕೆ ಉತ್ತರಿಸಿದ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌, ಈ ಮಸೂದೆ ಜಾರಿಯಿಂದ ದೇಶದ ಒಕ್ಕೂಟ ವ್ಯವಸ್ಥೆಗೆ ಯಾವುದೇ ಧಕ್ಕೆಯಾಗುವುದಿಲ್ಲ. ಭಾರತ್‌ ಒಕ್ಕೂಟ ವ್ಯವಸ್ಥೆಯಿಂದ ರಾಜ್ಯಗಳು ಹೊರ ಹೋಗಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್‌ ಹೇಳಿದ್ದಾರೆ. ಇದು ಆಕಸ್ಮಿಕವಾಗಿ ಜಾರಿಗೆ ಬಂದಿಲ್ಲ. ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದಲ್ಲಿ ಜಾರಿಯಾಗಿರುವುದು. ಪ್ರಧಾನಿ ನರೇಂದ್ರ ಮೋದಿಯವರ ಮುಂದಾಳತ್ವದಲ್ಲಿ ಈ ಮಸೂದೆಯನ್ನು ಜಂಟಿ ಸಂಸದೀಯ ಮಸೂದೆಗೆ ನೀಡಲು ಇಚ್ಛಿಸುತ್ತೇವೆ ಎಂದು ಮಸೂದೆ ಪರ ಬ್ಯಾಟ್‌ ಬೀಸಿದರು.

Tags:
error: Content is protected !!