ನವದೆಹಲಿ: ಲೋಕಸಭಾ ಚುನಾವಣೆ ವೇಳೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ “ಒಂದು ದೇಶ ಒಂದು ಚುನಾವಣೆʼ ಮಸೂದೆ”ಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಯಿತು.
ಲೋಕಸಭೆ ಕಲಾಪದಲ್ಲಿಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು, ಸಂವಿಧಾನ(121ನೇ ತಿದ್ದುಪಡಿ) ಮಸೂದೆ, ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ ಮಸೂದೆ 2024ನ್ನು ಮಂಡಿಸಿದರು. ಈ ಮಸೂದೆಗೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾದ ಕಾರಣ ಇನ್ನಷ್ಟು ಅಧ್ಯಯನ ಮಾಡಲು ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಶಿಫಾರಸ್ಸು ಮಾಡಲಾಯಿತು.
ಸಂಸತ್‌ನಲ್ಲಿ ಮಸೂದೆ ಮಂಡನೆಯಾಗುತ್ತಿದ್ದಂತೆ ಇಂಡಿಯಾ ಒಕ್ಕೂಟದ ಸದಸ್ಯರು ಭಾರೀ ವಿರೋಧ ವ್ಯಕ್ತಪಡಿಸಿ, ಎನ್‌ಡಿಎ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಸಂಸದ ಮನೀಶ್ ತಿವಾರಿ, ಈ ಮಸೂದೆಯೂ ಭಾರತದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತದೆ. ಕೇಂದ್ರ ಹಾಗೂ ರಾಜ್ಯಗಳನ್ನು ಏಕಕಾಲದಲ್ಲಿ ಒಟ್ಟಿಗೆ ಮಾಡಲು ಹೇಗೆ ಸಾಧ್ಯ? ಇದು ರಾಜ್ಯದ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಎಂದು ಕಿಡಿಕಾರಿದರು.
ಇನ್ನು ಎಸ್‌ಪಿ ಸಂಸದ ಧರ್ಮೇಂದ್ರ ಯಾದವ್ ಕೂಡ ವಿರೋಧಿಸಿ, ಎಂಟು ವಿಧಾನಸಭೆ ಕ್ಷೇತ್ರಗಳ ವಿಧಾನಸಭೆ ಚುನಾವಣೆಯನ್ನು ಒಟ್ಟಿಗೆ ಮಾಡಲು ನಿಮಗೆ ಸಾಧ್ಯವಾಗಲಿಲ್ಲ. ಈಗ ಇಡೀ ದೇಶದಲ್ಲಿ ಚುನಾವಣೆಯನ್ನು ಒಟ್ಟಿಗೆ ಮಾಡುತ್ತೇವೆ ಎಂದು ಹೇಳುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಪಕ್ಷಗಳ ಆರೋಪಕ್ಕೆ ಉತ್ತರಿಸಿದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಈ ಮಸೂದೆ ಜಾರಿಯಿಂದ ದೇಶದ ಒಕ್ಕೂಟ ವ್ಯವಸ್ಥೆಗೆ ಯಾವುದೇ ಧಕ್ಕೆಯಾಗುವುದಿಲ್ಲ. ಭಾರತ್ ಒಕ್ಕೂಟ ವ್ಯವಸ್ಥೆಯಿಂದ ರಾಜ್ಯಗಳು ಹೊರ ಹೋಗಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ. ಇದು ಆಕಸ್ಮಿಕವಾಗಿ ಜಾರಿಗೆ ಬಂದಿಲ್ಲ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಜಾರಿಯಾಗಿರುವುದು. ಪ್ರಧಾನಿ ನರೇಂದ್ರ ಮೋದಿಯವರ ಮುಂದಾಳತ್ವದಲ್ಲಿ ಈ ಮಸೂದೆಯನ್ನು ಜಂಟಿ ಸಂಸದೀಯ ಮಸೂದೆಗೆ ನೀಡಲು ಇಚ್ಛಿಸುತ್ತೇವೆ ಎಂದು ಮಸೂದೆ ಪರ ಬ್ಯಾಟ್ ಬೀಸಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…