ಹೊಸದಿಲ್ಲಿ: ಹಲವು ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದ ʼಒಂದು ದೇಶ ಒಂದು ಚುನಾವಣೆʼಗೆ ಇಂದು ( ಸೆಪ್ಟೆಂಬರ್ 18 ) ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಈ ಸಂಬಂಧ ಕೇಂದ್ರ ಸರ್ಕಾರ 2023ರ ಸೆಪ್ಟೆಂಬರ್ 2ರಂದು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ 8 ಜನರ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯ ವರದಿಯನ್ನಾಧರಿಸಿ ಪ್ರಸ್ತಾವನೆಯನ್ನು ಮಂಡಿಸಲಾಗಿದ್ದು, ಚುನಾವಣೆಗಳ ವೆಚ್ಚ ಕಡಿತಗೊಳಿಸುವುದು ಇದರ ಹಿಂದಿನ ಉದ್ದೇಶ ಎಂದು ಸಮರ್ಥನೆ ನೀಡಲಾಗಿದೆ.
ಇನ್ನು ಮುಂದೆ ದೇಶದ ಎಲ್ಲೆಡೆ ಏಕಕಾಲಕ್ಕೆ ವಿಧಾನಸಭೆ ಹಾಗೂ ಲೋಕಸಭೆಯ ಚುನಾವಣೆಗಳು ಜರುಗಲಿವೆ.