ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಈ ಅವಧಿಯಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ತರಲು ಎನ್‌ಡಿಎ ಮೈತ್ರಿಕೂಟದ ಎಲ್ಲಾ ಪಕ್ಷಗಳು ಬೆಂಬಲ ಸೂಚಿಸಿವೆ ಎನ್ನಲಾಗಿದ್ದು, ಎಲ್ಲರ ವಿಶ್ವಾಸವನ್ನು ಬಿಜೆಪಿ ಪಕ್ಷ ಹೊಂದಿದೆ ಎಂದು ಹೇಳಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಉನ್ನತ ಮಟ್ಟದಲ್ಲಿ ಆಡಳಿತ ನಡೆಸುತ್ತಿದ್ದು, ಮೈತ್ರಿಕೂಟದ ಒಗ್ಗಟ್ಟು ಉಳಿದ ಅವಧಿಗೂ ಮುಂದುವರಿಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಇದೇ ಅವಧಿಯಲ್ಲಿ ದೇಶದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ಬರಲಿದೆ ಎಂದು ತಿಳಿದು ಬಂದಿದೆ.
ಇನ್ನು ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ನೀಡಿದ್ದ ಆಶ್ವಾಸನೆಗಳಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಒಂದು ಪ್ರಮುಖ ವಿಷಯವಾಗಿತ್ತು.
ಈ ಹಿನ್ನೆಲೆಯಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಈ ನಿಯಮ ಜಾರಿಗೆ ಬರಲಿದ್ದು, ಇದಕ್ಕೆ ವಿಪಕ್ಷದವರು ವಿರೋಧ ಕೂಡ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.