ನವದೆಹಲಿ: ಶೀಘ್ರದಲ್ಲೇ ದೇಶದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಮೊದಲಿಗೆ ಜನತೆಗೆ ದೀಪಾವಳಿ ಹಬ್ಬ ಹಾಗೂ ರಾಷ್ಟ್ರೀಯ ಏಕತಾ ದಿವಸ್ ಹಬ್ಬದ ಶುಭಾಶಯ ಕೋರಿದರು.
ಬಳಿಕ ಮಾತನಾಡಿದ ಅವರು, ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವಲ್ಲಿ ಅದರ ಮೌಲ್ಯ ಹೇಗಿರುತ್ತದೆ ಎಂಬುದನ್ನು ಒತ್ತಿ ಹೇಳಿದರು.
ಇನ್ನು ಮುಂದಿನ ವರ್ಷ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆ ಮಂಡಿಸಲಾಗುವುದು. ಸದ್ಯ ನಾವು ಇದಕ್ಕೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ಇದು ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.