ದೇಶ- ವಿದೇಶ

ʼಒಂದು ರಾಷ್ಟ್ರ ಒಂದು ಚುನಾವಣೆಗೆʼ ಕೇಂದ್ರ ಸಚಿವ ಸಂಪುಟ ಅಸ್ತು

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಸಮ್ಮತಿಸಿದೆ. ಕೇಂದ್ರವು ಚಳಿಗಾಲದ ಅಧಿವೇಶದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ ಎಂದು ವರದಿಯಾಗಿದೆ.

ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದ ಸಮಿತಿ ಮಾರ್ಚ್‌ನಲ್ಲಿ ವರದಿ ಸಲ್ಲಿಸಿತ್ತು. ವರದಿಯನ್ನು ಸಂಪುಟದ ಮುಂದೆ ಪ್ರಸ್ತಾಪಿಸಲಾಗಿದ್ದು, ಸಂಪುಟವು ಅಸ್ತು ಎಂದಿದೆ.

ಸಮಿತಿಯು ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಶಿಫಾರಸು ಮಾಡಿದೆ. ಹಾಗೆಯೇ ಇದಾದ ನೂರು ದಿನಗಳಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲೂ ಸಮಿತಿ ಹೇಳಿದೆ.

ಸಮಿತಿಯು ಮಾಡಿದ ಶಿಫಾರಸ್ಸುಗಳ ಅನುಷ್ಠಾನವನ್ನು ಪರಿಶೀಲಿಸಲು ಅನುಷ್ಠಾನ ಗುಂಪು ಸ್ಥಾಪಿಸಲು ಸಮಿತಿಯು ಪ್ರಸ್ತಾಪಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…

32 mins ago

ಕಾವೇರಿ ನೀರು ಪೋಲು ಮಾಡಿದರೆ 5000 ರೂ ದಂಡ

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…

42 mins ago

ಬೇಸಿಗೆಗೂ ಮುನ್ನವೇ ಹಾರಂಗಿ ಡ್ಯಾಮ್‌ನಲ್ಲಿ ನೀರಿನ ಮಟ್ಟ ಇಳಿಕೆ

ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…

47 mins ago

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

1 hour ago

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

6 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

6 hours ago