ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶ ಗಾಜಿಯಾಬಾದ್‌ನಲ್ಲಿ ನಡೆದಿದೆ.
ಅಪ್ರಾಪ್ತ ಸಹೋದರಿಯರು ತಡರಾತ್ರಿ ತಾರಸಿಯಿಂದ ಕೆಳಗೆ ಹಾರಿದ್ದಾರೆ. ಅವರ ಪೋಷಕರು ಆನ್‌ಲೈನ್ ಗೇಮಿಂಗ್ ಆಡುವುದನ್ನು ವಿರೋಧಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮೃತ ಬಾಲಕಿಯರನ್ನು ಪಾಖಿ (12), ಪ್ರಾಚಿ (14) ಮತ್ತು ವಿಶಿಕಾ (16) ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಈ ಮೂವರು ಆನ್‌ಲೈನ್ ವಿಡಿಯೋ ಗೇಮ್‌ಗಳಿಗೆ ವ್ಯಸನಿಯಾಗಿದ್ದರು ಎಂದು ವರದಿಯಾಗಿದೆ. ಅವರು ಆನ್‌ಲೈನ್, ಟಾಸ್ಕ್ ಆಧಾರಿತ ಕೊರಿಯನ್ ಲವ್ ಗೇಮ್ ಆಡುತ್ತಿದ್ದರು. ವರದಿಯಲ್ಲಿ ಉಲ್ಲೇಖಿಸಿರುವ ಪ್ರಕಾರ, ವ್ಯಸನವು ಎಷ್ಟರ ಮಟ್ಟಿಗೆ ತಲುಪಿತ್ತೆಂದರೆ, ಹುಡುಗಿಯರು ಶಾಲೆಗೆ ಹೋಗುವುದನ್ನು ನಿಲ್ಲಿಸಿ, ಹೆಚ್ಚಿನ ಸಮಯವನ್ನು ಆಟದಲ್ಲಿ ಕಳೆಯುತ್ತಿದ್ದರು ಎಂದು ವರದಿಯಾಗಿದೆ.
ಬೆಳಗಿನ ಜಾವ 2 ಗಂಟೆ ಸುಮಾರಿಗೆ ಗಾಜಿಯಾಬಾದ್‌ನ ವಸತಿ ಪಟ್ಟಣವಾದ ಭಾರತ್ ಸಿಟಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿಯರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಘಟನೆಯ ಹಿಂದಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾವಿಗೆ ಕಾರಣವಾದ ಸಂದರ್ಭಗಳ ಬಗ್ಗೆ ತಿಳಿಯಲು ಆತ್ಮಹತ್ಯೆ ಪತ್ರ ಅಥವಾ ಡಿಜಿಟಲ್ ಪುರಾವೆಗಳು ಲಭ್ಯವಿದೆಯೇ ಎಂದು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ.
ಹುಡುಗಿಯರು ಬಾಲ್ಕನಿಯಲ್ಲಿ ಪ್ಲಾಸ್ಟಿಕ್ ಕುರ್ಚಿಯನ್ನು ಇಟ್ಟು ಒಂಬತ್ತನೇ ಮಹಡಿಯಿಂದ ಒಬ್ಬೊಬ್ಬರಾಗಿ ಹಾರಿದ್ದಾರೆ. ಬಿದ್ದ ಕಾರಣ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಬ್ದ ಕೇಳಿ ಜನರು ಮತ್ತು ಕುಟುಂಬ ಸದಸ್ಯರು ಬರುವ ಹೊತ್ತಿಗೆ ಎಲ್ಲವೂ ಮುಗಿದಿತ್ತು.
ಪೊಲೀಸರು ಸ್ಥಳಕ್ಕೆ ಆಗಮಿಸಿ, ಶವಗಳನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಇಂತಹ ಟಾಸ್ಕ್ ಆಧಾರಿತ ಆಟಗಳಲ್ಲಿ, ಅಪಾಯಕಾರಿ ಸವಾಲುಗಳನ್ನು ನೀಡಲಾಗುತ್ತದೆ, ಅವುಗಳನ್ನು ಪೂರ್ಣಗೊಳಿಸಲು ಅವರು ಮಾನಸಿಕವಾಗಿ ಸವಾಲು ಎದುರಿಸುತ್ತಾರೆ. ಮೂವರು ಸಹೋದರಿಯರು ಅಂತಿಮ ಟಾಸ್ಕ್ ಪೂರ್ಣಗೊಳಿಸಲು ಅಥವಾ ಆಟದ ಪ್ರಭಾವದಿಂದ ಈ ತೀವ್ರ ಹೆಜ್ಜೆ ಇಟ್ಟಿದ್ದಾರೆ ಎಂದು ಶಂಕಿಸಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…