ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು ನೀಡಿದ್ದಾರೆ.
ತೈಲವನ್ನು ಸಾಗಿಸುವ ಹಾರ್ಮುಜ್ ಜಲಸಂಧಿಯನ್ನು ಹಡಗು ಸಂಚಾರಕ್ಕಾಗಿ ಇರಾನ್ ಮತ್ತೆ ತೆರೆಯಬೇಕು. ಇಲ್ಲದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದಾರೆ.
ಟ್ರಂಪ್ ಅವರ ಎಚ್ಚರಿಕೆಗೆ ಪ್ರತಿಕ್ರಿಯಿಸಿರುವ ಇರಾನ್ ಸೇನೆಯು, ಈ ಪ್ರದೇಶದಲ್ಲಿ ಅಮೇರಿಕಾಗೆ ಸೇರಿದ ಎಲ್ಲಾ ಇಂಧನ, ತಂತ್ರಜ್ಞಾನ ಮತ್ತು ಉಪ್ಪು ನೀರಿನ ನಿರ್ಮೂಲನಾ ಮೂಲ ಸೌಕರ್ಯಗಳನ್ನು ಟಾರ್ಗೆಟ್ ಮಾಡಿ ಹೊಡೆಯುವುದಾಗಿ ಬೆದರಿಕೆ ಹಾಕಿದೆ.
ಶತ್ರುಗಳು ಇರಾನ್‌ನ ಇಂಧನ ಮೂಲಸೌಕರ್ಯಗಳನ್ನು ದಾಳಿಗೆ ಗುರಿಯಾಗಿಸಿಕೊಂಡರೆ, ಅಮೇರಿಕಾ ಮತ್ತು ಈ ಪ್ರದೇಶದ ಆಡಳಿತಕ್ಕೆ ಸೇರಿದ ಎಲ್ಲಾ ಇಂಧನ, ಮಾಹಿತಿ ತಂತ್ರಜ್ಞಾನ ಮತ್ತು ಉಪ್ಪುನೀರಿನ ನಿರ್ಮೂಲನಾ ಮೂಲಸೌಕರ್ಯಗಳನ್ನು ಟಾರ್ಗೆಟ್ ಮಾಡಲಾಗುವುದು ಎಂದು ಇರಾನಿನ ಮಿಲಿಟರಿ ಕಾರ್ಯಾಚರಣೆಯ ಕಮಾಂಡ್ ಖತಮ್ ಅಲ್-ಅನ್ಬಿಯಾ ಕೌಂಟರ್ ಕೊಟ್ಟಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…