ದೇಶ- ವಿದೇಶ

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಬಂದ್‌ ಆಗಿರುವ ಹಾರ್ಮುಜ್‌ ಜಲಸಂಧಿಯನ್ನು ತಕ್ಷಣವೇ ತೆರೆಯಬೇಕು. ಇಲ್ಲದಿದ್ದರೆ ಇರಾನ್ ಭೀಕರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಇರಾನಿನ ಎಲ್ಲಾ ವಿದ್ಯಾತ್‌ ಸ್ಥವರ, ತೈಲ ಬಾವಿಗಳು ಸೇರಿದಂತೆ ಖಾರ್ಗ್‌ ದ್ವೀಪಗಳನ್ನು ಸ್ಫೋಟಿಸುವುದಾಗಿ ಹೇಳಿದ್ದಾರೆ.

ಇರಾನ್‌ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕದ ಆಡಳಿತ ಗಂಭೀರ ಚರ್ಚೆ ನಡೆಸುತ್ತಿದೆ. ಶೀಘ್ರದಲ್ಲೇ ಒಪ್ಪಂದಕ್ಕೆ ಬರದಿದ್ದರೆ ಇರಾನಿನ ಮೂಲಸೌಕರ್ಯ ಘಟಕಗಳನ್ನೇ ನಾಶ ಮಾಡುವುದಾಗಿ ಗುಡುಗಿದ್ದಾರೆ

ಮೊದಲು 48 ಗಂಟೆಗಳ ಅವಧಿ ನೀಡಿದ್ದ ಟ್ರಂಪ್ ನಂತರ ಅದನ್ನು 5 ದಿನಗಳವರೆಗೆ ವಿಸ್ತರಿಸಿದರು. ಇದೀಗ ಕೊನೆಯ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಯುದ್ಧ ಈಗಾಗಲೇ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಪ್ರದೇಶದಲ್ಲಿ ತೀವ್ರ ಉದ್ವಿಗ್ನತೆ ಮುಂದುವರಿದಿದೆ. ಟ್ರಂಪ್ ಅವರ ಈ ಎಚ್ಚರಿಕೆಯಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

 

ಆಂದೋಲನ ಡೆಸ್ಕ್

Recent Posts

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

4 mins ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

49 mins ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

56 mins ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

2 hours ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

3 hours ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

3 hours ago