Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ತುಷ್ಟೀಕರಣ ರಾಜಕೀಯಕ್ಕೆ ತೆರೆ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ

ನವದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುದೊಡ್ಡ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌, ಎಎಪಿ ಪಕ್ಷದ ತುಷ್ಟೀಕರಣ ರಾಜಕೀಯಕ್ಕೆ ತೆರೆ ಎಳಿದಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿಯ ಗೆಲುವಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷಿಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ, ಅಭಿವೃದ್ಧಿಯ ಕನಸುಗಳು 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಪಕ್ಷ ಅಧಿಕಾರ ಬಂದಿರುವುದಕ್ಕೆ ಸಾಕ್ಷಿ. ಹಾಗೆಯೇ, ವಿರೋಧ ಪಕ್ಷಗಳ ತುಷ್ಟೀಕರಣ ರಾಜಕೀಯ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಉತ್ತಮ ಉದಾಹರಣೆ ಎಂದು ಹೇಳಿದ್ದಾರೆ.

ದೆಹಲಿಯ ಜನರ ಆದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ದೇಶದ ಅಭಿವೃದ್ದಿಯ ಯೋಜನೆಗಳಿಗೆ ಸಿಕ್ಕಿರುವ ಬೆಂಬಲ ಎಂದು ನಾನು ಭಾವಿಸುತ್ತೇನೆ. ಮಿತ್ರ ಪಕ್ಷದ ಗೆಲುವಿಗೆ ಶ್ರಮಿಸಿದ ಎಲ್ಲರಿಗೂ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Tags:
error: Content is protected !!