ನವದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುದೊಡ್ಡ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್, ಎಎಪಿ ಪಕ್ಷದ ತುಷ್ಟೀಕರಣ ರಾಜಕೀಯಕ್ಕೆ ತೆರೆ ಎಳಿದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿಯ ಗೆಲುವಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷಿಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ, ಅಭಿವೃದ್ಧಿಯ ಕನಸುಗಳು 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಪಕ್ಷ ಅಧಿಕಾರ ಬಂದಿರುವುದಕ್ಕೆ ಸಾಕ್ಷಿ. ಹಾಗೆಯೇ, ವಿರೋಧ ಪಕ್ಷಗಳ ತುಷ್ಟೀಕರಣ ರಾಜಕೀಯ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಉತ್ತಮ ಉದಾಹರಣೆ ಎಂದು ಹೇಳಿದ್ದಾರೆ.
ದೆಹಲಿಯ ಜನರ ಆದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ದೇಶದ ಅಭಿವೃದ್ದಿಯ ಯೋಜನೆಗಳಿಗೆ ಸಿಕ್ಕಿರುವ ಬೆಂಬಲ ಎಂದು ನಾನು ಭಾವಿಸುತ್ತೇನೆ. ಮಿತ್ರ ಪಕ್ಷದ ಗೆಲುವಿಗೆ ಶ್ರಮಿಸಿದ ಎಲ್ಲರಿಗೂ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…