ಶ್ರೀನಗರ: ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಮತ್ತೆ ಮೂವರು ಉಗ್ರರನ್ನು ಸದೆಬಡಿಯಲಾಗಿದೆ.
ಆಪರೇಷನ್ ಅಖಾಲ್ ಕಾರ್ಯಾಚರಣೆಯಲ್ಲಿ ಇಂದು ಕೂಡ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭಾರತೀಯ ಸೇನೆ ನಿನ್ನೆ ಮೂವರು ಉಗ್ರರನ್ನು ಸದೆಬಡಿದಿತ್ತು. ಇಂದು ಸಹ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರ ಕುಲ್ಗಾಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ. ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನೆ, ಸಿಆರ್‌ಪಿಎಫ್ ಜಂಟಿ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ.
ಇನ್ನು ಘಟನೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದು, ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.





