Mysore
16
broken clouds

Social Media

ಬುಧವಾರ, 21 ಜನವರಿ 2026
Light
Dark

ಆಪರೇಷನ್‌ ಮಹಾದೇವ : ಪಹಲ್ಗಾಮ್‌ ದಾಳಿಯ ರೂವಾರಿ ಹತ್ಯೆ

ಜಮ್ಮು ಮತ್ತು ಕಾಶ್ಮೀರ : ಭಾರತದ ಮೇಲೆ ನಡೆದ ಅತಿದೊಡ್ಡ ಭಯೋತ್ಪಾದನಾ ದಾಳಿಗಳಲ್ಲಿ ಒಂದಾದ ಕಾಶ್ಮೀರದ ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಆಪರೇಷನ್‌ ಮಹಾದೇವ ಹೆಸರಿನಲ್ಲಿ ಭದ್ರತಾ ಪಡೆ ಹೊಡೆದುರುಳಿಸಿದೆ.

ಮೃತ ಉಗ್ರರನ್ನು ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್‌ ಹಾಗೂ ಅಬು ಹಮ್ಜಾ ಎಂದು ಗುರುತಿಸಲಾಗಿದೆ. ಉಗ್ರ ಹಸೀಮ್‌ ಅಲಿಯಾಸ್‌ ಸುಲೇಮಾನ್‌ ಏಪ್ರಿಲ್‌ 22 ರಂದು ಪಹಲ್ಗಾಮ್‌ನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಕ ರೂವಾರಿಯಾಗಿದ್ದ ಎಂದ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಹರ್ವಾನ್‌ನ ಮುಲ್ನಾರ್ ಪ್ರದೇಶದಲ್ಲಿ ಆತ ಅಡಗಿದ್ದಾನೆ ಎಂಬ ಗುಪ್ತಚರ ಮಾಹಿತಿಯ ನಂತರ ಭಾರತೀಯ ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಆಪರೇಷನ್ ಮಹಾದೇವ್ ಕಾರ್ಯಾಚರಣೆ ನಡೆಸಿ, ಉಗ್ರರನ್ನು ಮಟ್ಟ ಹಾಕಿದ್ದಾರೆ.

ಲಿಡ್ವಾಸ್ ಪ್ರದೇಶದಲ್ಲಿ ಉಗ್ರಗಾಮಿಗಳು ಇದ್ದಾರೆ ಎಂಬ ಗುಪ್ತಚರ ಮಾಹಿತಿಯ ನಂತರ ಆಪರೇಷನ್ ಮಹಾದೇವ್ ಎಂಬ ಹೆಸರಿನ ಈ ಹೈ-ರಿಸ್ಕ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಭಾರತೀಯ ಸೇನಾ ವಿಶೇಷ ಪಡೆಗಳು ಈ ದಾಳಿಯನ್ನು ಮುನ್ನಡೆಸಿದವು. ತೀವ್ರವಾದ ಗುಂಡಿನ ಚಕಮಕಿಯ ಸಮಯದಲ್ಲಿ ಮೂಸಾ ಅವರನ್ನು ಹತ್ಯೆ ಮಾಡಲಾಯಿತು. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು, ಅವರಲ್ಲಿ ಹೆಚ್ಚಿನವರು ಪ್ರವಾಸಿಗರು.

ಹಾಶಿಮ್ ಮೂಸಾ ಜೊತೆ ಮೃತರಾದ ಇನ್ನೊಬ್ಬರು ಉಗ್ರರು ಕೂಡ ಪಾಕಿಸ್ತಾನಿ ಪ್ರಜೆಗಳು ಎಂದು ಹೇಳಲಾಗಿದೆ. ಭದ್ರತಾ ಪಡೆಗಳು ಅವರ ದೇಹಗಳನ್ನು ಮತ್ತು ಅಮೆರಿಕ ನಿರ್ಮಿತ ಕಾರ್ಬೈನ್, ಎಕೆ -47 ರೈಫಲ್, 17 ರೈಫಲ್ ಗ್ರೆನೇಡ್‌ಗಳು ಮತ್ತು ಇತರ ಮಿಲಿಟರಿ ದರ್ಜೆಯ ಉಪಕರಣಗಳು ಸೇರಿದಂತೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳ ಸಂಗ್ರಹವನ್ನು ವಶಪಡಿಸಿಕೊಂಡಿವೆ.

Tags:
error: Content is protected !!