ದೇಶ- ವಿದೇಶ

ಆಪರೇಷನ್‌ ಮಹಾದೇವ : ಪಹಲ್ಗಾಮ್‌ ದಾಳಿಯ ರೂವಾರಿ ಹತ್ಯೆ

ಜಮ್ಮು ಮತ್ತು ಕಾಶ್ಮೀರ : ಭಾರತದ ಮೇಲೆ ನಡೆದ ಅತಿದೊಡ್ಡ ಭಯೋತ್ಪಾದನಾ ದಾಳಿಗಳಲ್ಲಿ ಒಂದಾದ ಕಾಶ್ಮೀರದ ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಆಪರೇಷನ್‌ ಮಹಾದೇವ ಹೆಸರಿನಲ್ಲಿ ಭದ್ರತಾ ಪಡೆ ಹೊಡೆದುರುಳಿಸಿದೆ.

ಮೃತ ಉಗ್ರರನ್ನು ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್‌ ಹಾಗೂ ಅಬು ಹಮ್ಜಾ ಎಂದು ಗುರುತಿಸಲಾಗಿದೆ. ಉಗ್ರ ಹಸೀಮ್‌ ಅಲಿಯಾಸ್‌ ಸುಲೇಮಾನ್‌ ಏಪ್ರಿಲ್‌ 22 ರಂದು ಪಹಲ್ಗಾಮ್‌ನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಕ ರೂವಾರಿಯಾಗಿದ್ದ ಎಂದ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಹರ್ವಾನ್‌ನ ಮುಲ್ನಾರ್ ಪ್ರದೇಶದಲ್ಲಿ ಆತ ಅಡಗಿದ್ದಾನೆ ಎಂಬ ಗುಪ್ತಚರ ಮಾಹಿತಿಯ ನಂತರ ಭಾರತೀಯ ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಆಪರೇಷನ್ ಮಹಾದೇವ್ ಕಾರ್ಯಾಚರಣೆ ನಡೆಸಿ, ಉಗ್ರರನ್ನು ಮಟ್ಟ ಹಾಕಿದ್ದಾರೆ.

ಲಿಡ್ವಾಸ್ ಪ್ರದೇಶದಲ್ಲಿ ಉಗ್ರಗಾಮಿಗಳು ಇದ್ದಾರೆ ಎಂಬ ಗುಪ್ತಚರ ಮಾಹಿತಿಯ ನಂತರ ಆಪರೇಷನ್ ಮಹಾದೇವ್ ಎಂಬ ಹೆಸರಿನ ಈ ಹೈ-ರಿಸ್ಕ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಭಾರತೀಯ ಸೇನಾ ವಿಶೇಷ ಪಡೆಗಳು ಈ ದಾಳಿಯನ್ನು ಮುನ್ನಡೆಸಿದವು. ತೀವ್ರವಾದ ಗುಂಡಿನ ಚಕಮಕಿಯ ಸಮಯದಲ್ಲಿ ಮೂಸಾ ಅವರನ್ನು ಹತ್ಯೆ ಮಾಡಲಾಯಿತು. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು, ಅವರಲ್ಲಿ ಹೆಚ್ಚಿನವರು ಪ್ರವಾಸಿಗರು.

ಹಾಶಿಮ್ ಮೂಸಾ ಜೊತೆ ಮೃತರಾದ ಇನ್ನೊಬ್ಬರು ಉಗ್ರರು ಕೂಡ ಪಾಕಿಸ್ತಾನಿ ಪ್ರಜೆಗಳು ಎಂದು ಹೇಳಲಾಗಿದೆ. ಭದ್ರತಾ ಪಡೆಗಳು ಅವರ ದೇಹಗಳನ್ನು ಮತ್ತು ಅಮೆರಿಕ ನಿರ್ಮಿತ ಕಾರ್ಬೈನ್, ಎಕೆ -47 ರೈಫಲ್, 17 ರೈಫಲ್ ಗ್ರೆನೇಡ್‌ಗಳು ಮತ್ತು ಇತರ ಮಿಲಿಟರಿ ದರ್ಜೆಯ ಉಪಕರಣಗಳು ಸೇರಿದಂತೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳ ಸಂಗ್ರಹವನ್ನು ವಶಪಡಿಸಿಕೊಂಡಿವೆ.

ಆಂದೋಲನ ಡೆಸ್ಕ್

Recent Posts

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

3 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

2 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

3 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

3 hours ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

3 hours ago