narendra modi
ನವದೆಹಲಿ: ಸಂಸತ್ ಮುಂಗಾರು ಅಧಿವೇಶನದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಬಗ್ಗೆ ಮಾತನಾಡಿದ್ದಾರೆ.
ಆಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ಶೌರ್ಯ ಪ್ರದರ್ಶಿಸಿದ್ದು, ಈ ಭಾರತದ ವಿಜಯೋತ್ಸವದ ಅಧಿವೇಶನವಾಗಿದೆ. ನನ್ನ ಮೇಲೆ ಜನರು ನಂಬಿಕೆ ಇಟ್ಟಿದ್ದಾರೆ. ದೇಶದ ಜನರು ನನಗೆ ಆಶೀರ್ವಾದ ಮಾಡಿದರು. ದೇಶದ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ. ಧರ್ಮವನ್ನು ಕೇಳಿ ಹತ್ಯೆ ಮಾಡಿದ್ದವರಿಗೆ ತಕ್ಕ ಪಾಠ ಕಲಿಸಿದ್ದೇವೆ. ಪ್ರವಾಸಿಗರ ಹತ್ಯೆಗೆ ಕಾರಣರಾದವರನ್ನು ಮಟ್ಟ ಹಾಕಿದ್ದೇವೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಯಾರು ಭಾರತದ ಪರ ವಹಿಸುವುದಿಲ್ಲವೋ ಅವರಿಗೆ ಚೀನಾ ಕಾಣಿಸುತ್ತದೆ ಎಂದು ವಿಪಕ್ಷಗಳಿಗೆ ಟಾಂಗ್ ಕೊಟ್ಟರು.
ಇನ್ನು ಉಗ್ರರಿಗೆ ಕೊಟ್ಟ ಶಿಕ್ಷೆಯ ಬಗ್ಗೆ ನಮಗೆ ಹೆಮ್ಮೆಯಿದೆ. ಉಗ್ರರನ್ನು ಮಣ್ಣಲ್ಲಿ ಮಣ್ಣಾಗಿಸುತ್ತೇವೆ ಎಂದಿದ್ದೆ. ನಮ್ಮ ಸೈನಿಕರು ಅದೇ ರೀತಿ ಮಾಡಿದ್ದಾರೆ. ಪಾಕ್‌ನ ಮೂಲೆ ಮೂಲೆಯಲ್ಲಿದ್ದ ಉಗ್ರರ ನೆಲೆ ಧ್ವಂಸವಾಗಿದೆ. ಅಣ್ವಸ್ತ್ರದ ಬೆದರಿಕೆಗೆ ಭಾರತ ಹೆದರುವುದಿಲ್ಲ. ಆಪರೇಷನ್ ಸಿಂಧೂರ್‌ನಲ್ಲಿ ಶಕ್ತಿ ಪ್ರದರ್ಶನ ಮಾಡಿದೆ. ಆಪರೇಷನ್ ಸಿಂಧೂರ್ ಸಂಪೂರ್ಣ ಯಶಸ್ವಿಯಾಗಿದೆ. ಪಾಕಿಸ್ತಾನದ ಏರ್‌ಬೇಸ್‌ಗಳು ನಾಶವಾಗಿವೆ. ಕೇವಲ 22 ನಿಮಿಷದಲ್ಲಿ ಪಾಕ್‌ಗೆ ತಕ್ಕ ಉತ್ತರ ಕೊಟ್ಟಿದ್ದೇವೆ. ಇಡೀ ದೇಶದ ಪರವಾಗಿ ಭಾರತೀಯ ಸೇನೆಗೆ ಅಭಿನಂದನೆಗಳು ಎಂದು ಸಂತಸ ವ್ಯಕ್ತಪಡಿಸಿದರು.
ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್ ರಕ್ಷಣಾ…
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…
ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್…
ಅಹಮದಬಾದ್ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.17) ತಲುಪಿರುವುದಾಗಿ ವರದಿಯಾಗಿದೆ.…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ…