ದೇಶ- ವಿದೇಶ

ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ವಿರುದ್ಧ ವಿಪಕ್ಷಗಳಿಂದ ವಿರೋಧ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಪ್ರಸ್ತಾವಿಸಿರುವ ‘ಒಂದು ರಾಷ್ಟ್ರ ಒಂದು ಚುನಾವಣೆ’ ವಿಧೇಯಕವನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ಇದಕ್ಕೆ ಕಾಂಗ್ರೆಸ್​ ಸೇರಿದಂತೆ I.N.D.I.A ಕೂಟದ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ಪ್ರಸ್ತಾವಿತ ಒಂದು ದೇಶ, ಒಂದು ಚುನಾವಣೆ ವಿಧೇಯಕವು ಸಂವಿಧಾನದ 129ನೇ ತಿದ್ದುಪಡಿ ಮಸೂದೆಯಾಗಿದ್ದು, ಇದು ದೇಶದಲ್ಲಿ ಏಕಕಾಲಕ್ಕೆ ಎಲ್ಲ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಮಹತ್ತರ ಉದ್ದೇಶ ಹೊಂದಿದೆ. ಈ ವಿಧೇಯಕದ ಜೊತೆಗೆ, ಜಮ್ಮು-ಕಾಶ್ಮೀರ ಮತ್ತು ದೆಹಲಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಧಾನಸಭೆ ಜೊತೆಗೆ, ಲೋಕಸಭೆ ಚುನಾವಣೆ ನಡೆಸಲು ಪ್ರಸ್ತಾವಿತ ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ- 2024 ಮಂಡನೆಯಾಗಲಿದೆ.

ಸಂವಿಧಾನದ 129ನೇ ತಿದ್ದುಪಡಿ ಮಸೂದೆಯು ಸಂವಿಧಾನದಲ್ಲಿ ಹೊಸ ವಿಧಿ 82ಎ ಅನ್ನು ಸೇರಿಸಲು ಪ್ರಸ್ತಾಪಿಸುತ್ತದೆ. ಇದು, ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಅವಕಾಶ ಕಲ್ಪಿಸುತ್ತದೆ. ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆ ಅಧಿಕಾರಾವಧಿಯನ್ನು ನಿರ್ಧರಿಸಲು ಕಲಂ 83 ಮತ್ತು 172ನೇ ವಿಧಿಗಳನ್ನು ತಿದ್ದುಪಡಿ ಮಾಡಲು ಅವಕಾಶ ನೀಡುತ್ತದೆ.

ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ವಿಧೇಯಕವು, ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳ ಚುನಾವಣೆಯ ಜೊತೆಗೆ ದೆಹಲಿ ಮತ್ತು ಜಮ್ಮು- ಕಾಶ್ಮೀರದ ವಿಧಾನಸಭೆಗೂ ಚುನಾವಣೆ ನಡೆಸಲು ಕೇಂದ್ರಾಡಳಿತ ಪ್ರದೇಶಗಳ ಕಾಯ್ದೆ 1963ರ ಸೆಕ್ಷನ್ 5, ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರದ ಕಾಯ್ದೆ 1991ರ ಸೆಕ್ಷನ್ 5 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ 2019ರ ಸೆಕ್ಷನ್ 17ಕ್ಕೆ ತಿದ್ದುಪಡಿ ಮಾಡಲು ಪ್ರಸ್ತಾಪಿಸುತ್ತದೆ.

ವಿಧೇಯಕಗಳ ಅಂಗೀಕಾರದ ನಂತರ ಏನಾಗುತ್ತದೆ? ವಿಧೇಯಕಗಳು ಅಂಗೀಕಾರದ ಬಳಿಕ, ಹೊಸ ವಿಧಿಯ (82A) ನಿಯಮಗಳು ಜಾರಿಗೆ ಬರುತ್ತವೆ. ಇದರ ಪ್ರಕಾರ, ಸಾರ್ವತ್ರಿಕ ಚುನಾವಣೆ ನಡೆದು ಲೋಕಸಭೆಯ ಮೊದಲ ಅಧಿವೇಶನದಲ್ಲಿ ದೇಶದ ರಾಷ್ಟ್ರಪತಿ ಒಂದು ಅಧಿಸೂಚನೆಯನ್ನು ಹೊರಡಿಸುತ್ತಾರೆ. ಅದರಲ್ಲಿ ಸಂಸತ್​ ಅನ್ನು ಚುನಾಯಿಸಿದ ದಿನಾಂಕವನ್ನು ಘೋಷಿಸಲಾಗುತ್ತದೆ.

ಅಂದರೆ, ರಾಷ್ಟ್ರಪತಿಗಳು ನಿಗದಿ ಮಾಡಿದ ದಿನಾಂಕದಿಂದ ಹಿಡಿದು ಮುಂದಿನ ಐದು ವರ್ಷ ಸಂಸತ್ತಿನ ಅಧಿಕಾರದ ಅವಧಿಯಾಗಿರುತ್ತದೆ. ಇದರ ಜೊತೆಗೆ ರಾಜ್ಯಗಳ ವಿಧಾನಸಭೆಗಳ ಅಧಿಕಾರಾವಧಿಯು ಸಂಸತ್​​ ಅವಧಿಯ ದಿನಾಂಕದಂದೇ ಮುಗಿಯಲಿದೆ. ಬಳಿಕ ಲೋಕಸಭೆ ಮತ್ತು ಎಲ್ಲಾ ವಿಧಾನಸಭೆಗಳಿಗೆ ಒಮ್ಮೆಲೇ ಸಾರ್ವತ್ರಿಕ ಚುನಾವಣೆಗಳು ಜರುಗಲಿವೆ.
ಉದಾಹರಣೆಗೆ, ಪ್ರಸ್ತುತ ಲೋಕಸಭೆಯ ಮೊದಲ ಅಧಿವೇಶನದ ದಿನಾಂಕ ಜೂನ್ 24 ಆದಲ್ಲಿ, ಲೋಕಸಭೆ ಮತ್ತು ಎಲ್ಲಾ ವಿಧಾನಸಭೆಗಳಿಗೆ ಮೊದಲ ಏಕಕಾಲಿಕ ಚುನಾವಣೆಯು ಜೂನ್ 2029 ರಲ್ಲಿ ನಡೆಯಬೇಕು. ಹೀಗಾಗಿ, ಜೂನ್​ 2024 ರ ನಂತರ ಮತ್ತು ಜೂನ್​​ 2029 ಕ್ಕೂ ಮೊದಲು ಯಾವುದೇ ರಾಜ್ಯ ವಿಧಾನಸಭೆಗಳ ಅಧಿಕಾರಾವಧಿ ಮುಗಿದಲ್ಲಿ, ಅವನ್ನು 2029 ರ ಸಾರ್ವತ್ರಿಕ ಚುನಾವಣೆವರೆಗೂ ವಿಸ್ತರಿಸಲು ಅವಕಾಶ ನೀಡುತ್ತದೆ.

ಲೋಕಸಭೆ ಅಥವಾ ವಿಧಾನಸಭೆ ವಿಸರ್ಜನೆಯಾದರೆ? ಲೋಕಸಭೆ ಅಥವಾ ವಿಧಾನಸಭೆಗಳ ಪೂರ್ಣಾವಧಿಗಿಂತ ಮುಂಚೆಯೇ ಸರ್ಕಾರ ವಿಸರ್ಜನೆಯಾದರೆ, ಈಗಿರುವಂತೆ ಮಧ್ಯಂತರ ಚುನಾವಣೆ ನಡೆಯತ್ತವೆ. ಆದರೆ, ಈ ಹಿಂದಿನಂತೆ ಚುನಾವಣೆ ನಡೆದು ಹೊಸ ಸರ್ಕಾರ ರಚನೆಯಾದ ದಿನಾಂಕದಿಂದ ಐದು ವರ್ಷಗಳು ಇರುವುದಿಲ್ಲ. ಬದಲಾಗಿ, ಲೋಕಸಭೆ ಅಥವಾ ರಾಜ್ಯಗಳ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ನಡೆದ ದಿನಾಂಕಕ್ಕೆ ಸಮಾನವಾಗಿ ಅಂದಿಗೆ ಅಧಿಕಾರಾವಧಿ ಮುಗಿಯುತ್ತದೆ.

ಉದಾಹರಣೆಗೆ, 2029 ರ ಸಾರ್ವತ್ರಿಕ ಚುನಾವಣೆಯ ನಂತರ ಲೋಕಸಭೆ ಅಥವಾ ಯಾವುದೇ ರಾಜ್ಯ ವಿಧಾನಸಭೆಗಳು ವಿಸರ್ಜನೆಯಾದರೆ, ಮಧ್ಯಂತರ ಚುನಾವಣೆಯನ್ನು ನಡೆಸಲಾಗುತ್ತದೆ. ಮಧ್ಯಂತರ ಚುನಾವಣೆಯ ಮೂಲಕ ರಚಿತವಾದ ಹೊಸ ಸರ್ಕಾರದ ಅಧಿಕಾರಾವಧಿಯು ಜೂನ್ 2034 ಕ್ಕೆ ಮುಗಿಯುತ್ತದೆ. ಅಂದರೆ, ಮಧ್ಯಂತರ ಚುನಾವಣೆಯ ಅವಧಿಯು ಆಗ ಐದು ವರ್ಷ ಆಗಿರುವುದಿಲ್ಲ.

ವಿಧಾನಸಭೆಗಳ ಚುನಾವಣೆ ಮುಂದೂಡಬಹುದೇ? ಲೋಕಸಭೆಯ ಜೊತೆಗೆ ವಿಧಾನಸಭೆಯ ಚುನಾವಣೆ ನಡೆದು, ಆ ವಿಧಾನಸಭೆಯು ಪೂರ್ಣಾವಧಿ ಮುಗಿಸದೆ ವಿಸರ್ಜನೆಯಾದಲ್ಲಿ ಅದಕ್ಕೆ ಮಧ್ಯಂತರ ಚುನಾವಣೆ ನಡೆಯಲಿದೆ. ಹಾಗೊಂದು ವೇಳೆ ಚುನಾವಣೆ ನಡೆಸಲು ಸಾಧ್ಯವಾಗದ ಪರಿಸ್ಥಿತಿ ಇದ್ದಲ್ಲಿ, ಅದನ್ನು ಕೇಂದ್ರ ಚುನಾವಣಾ ಆಯೋಗವು ನಿರ್ದಿಷ್ಟ ಅವಧಿಗೆ ಚುನಾವಣೆ ಮುಂದೂಡಬಹುದು. ಈ ಅವಧಿಯಲ್ಲಿ ರಾಷ್ಟ್ರಪತಿ ಆಡಳಿತ ಆ ರಾಜ್ಯದಲ್ಲಿ ಜಾರಿಯಲ್ಲಿರುತ್ತದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

2 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

3 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

3 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

3 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

3 hours ago