ದೇಶ- ವಿದೇಶ

ಇದು ಕಾಂಗ್ರೆಸ್ ಪ್ರಣಾಳಿಕೆಯ ಯಥಾವತ್ ಪ್ರಸ್ತುತಿ ; ಬಜೆಟ್ ಕುರಿತು ವಿಪಕ್ಷ ಟೀಕೆ

ನವದೆಹಲಿ : ಇದು ಕಾಂಗ್ರೆಸ್‌ ಪ್ರಣಾಳಿಕೆಯ ಯಥಾವತ್‌ ಪ್ರಸ್ತುತಿ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಬಜೆಟ್‌ ಭಾಷಣ ಕುರಿತು ಕಾಂಗ್ರೆಸ್‌ ಹಿರಿಯ ನಾಯಕ ಪಿ ಚಿದಂಬರ ಲೇವಡಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಮಾನ್ಯ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಈ ಬಾರಿಯ ಕಾಂಗ್ರೆಸ್‌ ಪ್ರಣಾಳಿಕೆಯನ್ನೆ ಮತ್ತೊಮ್ಮೆ ಓದಿದ್ದಾರೆ ಎಂದು ನನಗೆ ಸಂತೋಷವಾಗಿದೆ. ಕಾಂಗ್ರೆಸ್‌ ಪ್ರಣಾಳಿಕೆಯ ಪುಟ ೩೦ ರಲ್ಲಿ ವಿವರಿಸಿರುವ ಉದ್ಯೋಗ ಸಂಯೋಜಿತ ಪೋತ್ಸಾಹವನ್ನು ಮೋದಿ ಸರ್ಕಾರ ತನ್ನ ಬಜೆಟ್‌ ನಲ್ಲಿ ವಾಸ್ತವಿಕವಾಗಿ ಅಳವಡಿಸಿಕೊಂಡಿದೆ ಎಂದು ನನಗೆ ಸಂತೋಷವಾಯಿತು. ಪ್ರಣಾಳಿಕೆ ಪುಟ ೧೧ ರಲ್ಲಿ ಪ್ರತಿ ಅಪ್ರೆಂಟಿಸ್‌ ಗೆ ಭತ್ಯೆಯೊಂದಿಗೆ ಅಪ್ರೆಂಟಿಸ್‌ ಶಿಪ್‌ ಯೋಜನೆಯನ್ನು ಪರಿಚಯಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಪ್ರಣಾಳಿಕೆಯ ಇತರೆ ವಿಚಾರಗಳನ್ನೆ ನಿರ್ಮಲಾ ಸೀತಾರಾಮನ್‌ ನಕಲು ಮಾಡಿದ್ದಾರೆ ಎಂದು ಹೇಳಲು ನಾನು ಭಯಸುತ್ತೇನೆ. ಉಳಿದ ಮಾಹಿತಿಯನ್ನ ನಾನು ಶೀಘ್ರದಲ್ಲೆ ಪಟ್ಟಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

3 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago