ಟೆಹ್ರಾನ್: ಇರಾನ್‌ನ ಅಬ್ಬಾಸ್ ನಗರದ ಶಾಹಿದ್ ರಾಜೀ ಬಂದರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಒಮಾನ್‌ನಲ್ಲಿ ಇರಾನ್ ಮತ್ತು ಅಮೆರಿಕಾದೊಂದಿಗೆ ಮೂರನೇ ಸುತ್ತಿನ ಪರಮಾಣು ಒಪ್ಪಂದಗಳ ಕುರಿತು ಮಾತುಕತೆ ನಡೆಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ರಾಜೀ ಬಂದರು ಟೆಹ್ರಾನ್‌ನಿಂದ ಆಗ್ನೇಯಕ್ಕೆ 1050 ಕಿ.ಮೀ ದೂರದಲ್ಲಿರುವ ಹಾರ್ಮುಜ್ ಜಲಸಂಧಿಯಲ್ಲಿದೆ.
ಇದು ಪರ್ಷಿಯನ್ ಕೊಲ್ಲಿಯ ಕಿರಿದಾದ ದ್ವಾರವಾಗಿದ್ದು, ಈ ಬಂದರಿನ ಮೂಲಕ ವಿಶ್ವದ ಶೇಕಡಾ.20ರಷ್ಟು ತೈಲ ವ್ಯಾಪಾರ ನಡೆಯುತ್ತದೆ.
ಸ್ಫೋಟದ ತೀವ್ರತೆ ಸುಮಾರು 10 ಕಿ.ಮೀವರೆಗೂ ವ್ಯಾಪಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಘಟನೆಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.





