ದೇಶ- ವಿದೇಶ

ಇರಾನ್‌ನ ಪೋರ್ಟ್‌ ಸಿಟಿಯಲ್ಲಿ ಬಾಂಬ್‌ ಸ್ಫೋಟ: ನಾಲ್ವರು ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ

ಟೆಹ್ರಾನ್: ಇರಾನ್‌ನ ಅಬ್ಬಾಸ್‌ ನಗರದ ಶಾಹಿದ್‌ ರಾಜೀ ಬಂದರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಒಮಾನ್‌ನಲ್ಲಿ ಇರಾನ್‌ ಮತ್ತು ಅಮೆರಿಕಾದೊಂದಿಗೆ ಮೂರನೇ ಸುತ್ತಿನ ಪರಮಾಣು ಒಪ್ಪಂದಗಳ ಕುರಿತು ಮಾತುಕತೆ ನಡೆಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ರಾಜೀ ಬಂದರು ಟೆಹ್ರಾನ್‌ನಿಂದ ಆಗ್ನೇಯಕ್ಕೆ 1050 ಕಿ.ಮೀ ದೂರದಲ್ಲಿರುವ ಹಾರ್ಮುಜ್‌ ಜಲಸಂಧಿಯಲ್ಲಿದೆ.

ಇದು ಪರ್ಷಿಯನ್‌ ಕೊಲ್ಲಿಯ ಕಿರಿದಾದ ದ್ವಾರವಾಗಿದ್ದು, ಈ ಬಂದರಿನ ಮೂಲಕ ವಿಶ್ವದ ಶೇಕಡಾ.20ರಷ್ಟು ತೈಲ ವ್ಯಾಪಾರ ನಡೆಯುತ್ತದೆ.

ಸ್ಫೋಟದ ತೀವ್ರತೆ ಸುಮಾರು 10 ಕಿ.ಮೀವರೆಗೂ ವ್ಯಾಪಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಘಟನೆಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

 

ಆಂದೋಲನ ಡೆಸ್ಕ್

Recent Posts

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

1 hour ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

2 hours ago

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸದಸ್ಯರು

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಬಿಗ್‌ ಶಾಕ್‌ ಎದುರಾಗಿದ್ದು, ರಾಘವ್‌ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

2 hours ago

ಮೈಸೂರು| ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

3 hours ago

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…

3 hours ago

ಸಿಇಟಿ ಪರೀಕ್ಷೆ| ಜನಿವಾರ ತೆಗೆಸಿದ ಬೆಂಗಳೂರು ಕಾಲೇಜು: ಪೋಷಕರಿಂದ ಆಕ್ರೋಶ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…

4 hours ago