Mysore
25
broken clouds

Social Media

ಶನಿವಾರ, 12 ಜುಲೈ 2025
Light
Dark

ಮುಸ್ಲಿಮರನ್ನು ಸರ್ಕಾರ ಅಸ್ಪೃಶ್ಯರಂತೆ ಕಾಣುತ್ತಿದೆ: ಅಸಾದುದ್ದೀನ್‌ ಓವೈಸಿ ಗಂಭೀರ ಆರೋಪ

ನವದೆಹಲಿ: ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಎಐಎಂಐಎಂನ ಅಧ್ಯಕ್ಷ ಹಾಗೂ ಸಂಸದ ಅಸಾದುದ್ಧೀನ್‌ ಓವೈಸಿ ಆರೋಪಿಸಿದ್ದಾರೆ.

ಈ ಬಗ್ಗೆ ಲೋಕಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆ ಬಗ್ಗೆ ಮಾತನಾಡಿದ ಅವರು, ಮುಸ್ಲಿಮರನ್ನು ಸರ್ಕಾರ ಅಸ್ಪೃಶ್ಯರಂತೆ ಕಾಣುತ್ತಿದೆ ಎಂದು ಕಿಡಿಕಾರಿದರು.

ದೇಶದಲ್ಲಿ ಮುಸ್ಲಿಮರು ಕಡು ಬಡವರಾಗಿದ್ದು, ಮುಸ್ಲಿಂ ಸಮುದಾಯದ ಮಹಿಳೆಯರು ಕೂಡ ಸಾಕಷ್ಟು ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದರೂ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಹಿಂದಿನಿಂದಲೂ ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನವಂತೂ ಹೆಚ್ಚಳ ಕಂಡಿಲ್ಲ. ಹಜ್‌ ಸಮಿತಿಯು ಭ್ರಷ್ಟಾಚಾರ ಕೇಂದ್ರವಾಗಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಇನ್ನಾದರೂ ಮುಸ್ಲಿಮರ ಬಗ್ಗೆ ಕೇಂದ್ರ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು. ಅವರ ಅಭಿವೃದ್ಧಿಗೆ ಹೆಚ್ಚು ಹೆಚ್ಚು ಕಾರ್ಯಗಳನ್ನು ರೂಪಿಸಬೇಕು ಎಂದು ಆಗ್ರಹಿಸಿದರು.

ಕೊನೆಗೆ ಅಸಾದುದ್ಧೀನ್‌ ಓವೈಸಿ ಅವರು, ಭಾರತ ತೀವ್ರ ನೋವಿನಲ್ಲಿದೆ ಎಂದು ತಮ್ಮ ಭಾಷಣ ಮುಗಿಸಿದರು.

 

Tags:
error: Content is protected !!