ಚಂಡೀಗಢ: ಇದೇ ಏ.22ರಂದು ಪಹಲ್ಗಾಮ್‍ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ಘೋಷಣೆ ಮಾಡಿದ್ದಾರೆ
ಹರಿಯಾಣದ ಕರ್ನಾಲ್ ನಿವಾಸಿಯಾಗಿದ್ದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿಯೊಂದಿಗೆ ಜಮ್ಮು ಕಾಶ್ಮೀರಕ್ಕೆ ಹೋದಾಗ ಈ ಹತ್ಯೆ ನಡೆದಿದೆ. ನರ್ವಾಲ್ ಅವರ ಪೋಷಕರ ಆಶಯದಂತೆ ಕುಟುಂಬದ ಯಾವುದೇ ಸದಸ್ಯರಿಗೆ ಈ ಕೆಲಸವನ್ನು ನೀಡಲಾಗುವುದು ಎಂದು ಸಿಎಂ ಸೈನಿ ಭರವಸೆ ನೀಡಿದ್ದಾರೆ.
ಏಪ್ರಿಲ್ 22 ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ಸುಮಾರು 26 ಜನ ಅಮಾಯಕರು ಬಲಿಯಾಗಿದ್ದರು. ಈ ದಾಳಿಗೂ ಆರು ದಿನಗಳ ಹಿಂದೆ ಮದುವೆಯಾಗಿದ್ದ ವಿನಯ್ ನರ್ವಾಲ್ ತಮ್ಮ ಪತ್ನಿಯೊಂದಿಗೆ ಹನಿಮೂನ್‌ಗೆಂದು ಕಾಶ್ಮೀರಕ್ಕೆ ಹೋಗಿದ್ದರು. ಅಲ್ಲಿ, ಅವರನ್ನು ಏಪ್ರಿಲ್ 22 ರಂದು ಗುಂಡು ಹಾರಿಸಿ ಕೊಲ್ಲಲಾಯಿತು.