ಚಂಡೀಗಢ: ಇದೇ ಏ.22ರಂದು ಪಹಲ್ಗಾಮ್‍ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ಘೋಷಣೆ ಮಾಡಿದ್ದಾರೆ
ಹರಿಯಾಣದ ಕರ್ನಾಲ್ ನಿವಾಸಿಯಾಗಿದ್ದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿಯೊಂದಿಗೆ ಜಮ್ಮು ಕಾಶ್ಮೀರಕ್ಕೆ ಹೋದಾಗ ಈ ಹತ್ಯೆ ನಡೆದಿದೆ. ನರ್ವಾಲ್ ಅವರ ಪೋಷಕರ ಆಶಯದಂತೆ ಕುಟುಂಬದ ಯಾವುದೇ ಸದಸ್ಯರಿಗೆ ಈ ಕೆಲಸವನ್ನು ನೀಡಲಾಗುವುದು ಎಂದು ಸಿಎಂ ಸೈನಿ ಭರವಸೆ ನೀಡಿದ್ದಾರೆ.
ಏಪ್ರಿಲ್ 22 ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ಸುಮಾರು 26 ಜನ ಅಮಾಯಕರು ಬಲಿಯಾಗಿದ್ದರು. ಈ ದಾಳಿಗೂ ಆರು ದಿನಗಳ ಹಿಂದೆ ಮದುವೆಯಾಗಿದ್ದ ವಿನಯ್ ನರ್ವಾಲ್ ತಮ್ಮ ಪತ್ನಿಯೊಂದಿಗೆ ಹನಿಮೂನ್‌ಗೆಂದು ಕಾಶ್ಮೀರಕ್ಕೆ ಹೋಗಿದ್ದರು. ಅಲ್ಲಿ, ಅವರನ್ನು ಏಪ್ರಿಲ್ 22 ರಂದು ಗುಂಡು ಹಾರಿಸಿ ಕೊಲ್ಲಲಾಯಿತು.
ಗೋಡೆ ಕುಸಿತ , ಮಕ್ಕಳ ಆಟದ ಮೈದಾನದಲ್ಲೇ ಅಪಾಯದ ಭೀತಿ ಹಲಗೂರು: ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್…
ಕೃಷ್ಣ ಸಿದ್ದಾಪುರ ಸಿದ್ದಾಪುರ, ಮಾಲ್ದಾರೆ ಗ್ರಾಮ ಪಂಚಾಯಿತಿ ಮತದಾರರ ಸಂಖ್ಯೆಗೆ ಅನುಗುಣವಾಗಿ ಇರದ ಮತದಾರರ ಸಂಖ್ಯೆ ಸಿದ್ದಾಪುರ: ಸಿದ್ದಾಪುರ ಹಾಗೂ…
ಎಸ್.ಎಸ್.ಭಟ್ ಆಗಸ್ಟ್‌ನಲ್ಲಿ ಡೆಕ್ ಮೇಲೆ ಸಂಚಾರಕ್ಕೆ ಅನುವು, ಅಕ್ಟೋಬರ್‌ನಲ್ಲಿ ಅದೇ ಡೆಕ್ ಕಿತ್ತು ಸಂಚಾರಕ್ಕೆ ನಿರ್ಬಂಧ ನಂಜನಗೂಡು: ಹೊಸದಾಗಿ ನಿರ್ಮಿಸಿ…
ಚಿತ್ರದುರ್ಗ: ‘ನಾನು ಬರೀ ಖಾಲಿ ಮಾತನಾಡುವ ಗಿರಾಕಿ ಅಲ್ಲ. ರಾಜ್ಯದ ಪ್ರಜಾ ಸೇವಕನಾಗಿ ನುಡಿದಂತೆ ನಡೆಯುತ್ತೇನೆ’ ಎಂದು ಮುಖ್ಯಮಂತ್ರಿ ಡಿ.ಕೆ.…
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಸೋಲಿಗೆ ನೈತಿಕ ಹೊಣೆ ಹೊತ್ತು, ತಮ್ಮನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ಶಾಸಕ…