ದೇಶ- ವಿದೇಶ

ಪಹಲ್ಗಾಮ್‌ ದಾಳಿಗೆ ಭದ್ರತಾ ಲೋಪ ಕಾರಣ: ಸಂಸದೆ ಪ್ರಿಯಾಂಕಾ ಗಾಂಧಿ

ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯಲ್ಲಿಂದು ಪಹಲ್ಗಾಮ್‌ ದಾಳಿ ಬಗ್ಗೆ ಮಾತನಾಡಿದ್ದಾರೆ.

ದೇಶದ ಸೈನಿಕರು ಮತ್ತು ಸೇನೆಯ ಶೌರ್ಯಕ್ಕೆ ನಮಸ್ಕರಿಸಿ ಕೇಂದ್ರ ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಕೇಳಿದ ಪ್ರಿಯಾಂಕಾ ಗಾಂಧಿ ಅವರು, ರಕ್ಷಣಾ ಸಚಿವರ ಭಾಷಣದಲ್ಲಿ ಒಂದು ವಿಷಯ ನನಗೆ ಬೇಸರ ತರಿಸಿದೆ ಎಂದರು. ರಕ್ಷಣಾ ಸಚಿವರು ಎಲ್ಲದರ ಬಗ್ಗೆ ಮಾತನಾಡಿದರು. ದೇಶದ ಬಗ್ಗೆಯೂ ಮಾತನಾಡಿದರು. ಇತಿಹಾಸದ ಬಗ್ಗೆಯೂ ಪಾಠ ಹೇಳಿದರು. ಆದರೆ ಪಹಲ್ಗಾಮ್‌ ದಾಳಿ ಹೇಗೆ ಮತ್ತು ಏಕೆ ನಡೆಯುತು ಎಂಬುದನ್ನು ಹೇಳಲಿಲ್ಲ ಎಂದು ಹೇಳಿದರು.

ಜನರು ಸರ್ಕಾರವನ್ನು ನಂಬಿ ಪಹಲ್ಗಾಮ್‌ಗೆ ಹೋಗಿದ್ದರು. ಸರ್ಕಾರ ಅವರನ್ನು ದೇವರ ಕರುಣೆಗೆ ಬಿಟ್ಟಿತು. ಈ ದಾಳಿ ನಡೆಯಲು ಯಾರು ಹೊಣೆ? ನಾಗರಿಕರ ಸುರಕ್ಷತೆಯು ರಕ್ಷಣಾ ಸಚಿವರ ಜವಾಬ್ದಾರಿಯಲ್ಲವೇ, ಅದು ಗೃಹ ಸಚಿವರ ಜವಾಬ್ದಾರಿಯಲ್ಲವೇ ಎಂದು ಸರ್ಕಾರವನ್ನು ಕಟುವಾಗಿ ಪ್ರಶ್ನೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago