ಹೊಸದಿಲ್ಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಬಗ್ಗೆ ಸಾಮಾಜಿಕ ಜಾಲತಾಣ ʻಎಕ್ಸ್ʼನಲ್ಲಿ ಪೋಸ್ಟ್ ಹಾಕಿದ ಆರೋಪದಲ್ಲಿ ಖ್ಯಾತ ಬೋಜ್ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.
ದೇಶದ ವಿರೋಧಿ ಹೇಳಿಕೆ ನೀಡಲು ನೇಹಾ ಅವರು ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡಿದ್ದಾರೆ ಎಂದು ಅಭಯ್ ಸಿಂಗ್ ಅವರು ದೂರು ನೀಡಿದ್ದರು. ಈ ಆಧಾರದ ಮೇಲೆ ಉತ್ತರ ಪ್ರದೇಶದ ಹಜರತ್‌ಗಂಜ್ ಠಾಣೆಯಲ್ಲಿ ನೇಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸರ್ಕಾರದ ವೈಫಲ್ಯದ ಪರಿಣಾಮವಾಗಿ ಪಹಲ್ಗಾಮ್ ದಾಳಿ ನಡೆದಿದೆ. ಬಿಜೆಪಿಯು ಈ ದಾಳಿಯನ್ನು ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮತ ಗಳಿಕೆಗೆ ಬಳಸಿಕೊಳ್ಳಲಿದೆ ಎಂದು ನೇಹಾ ಅವರು ಎಕ್ಸ್‌ನಲ್ಲಿ ಆರೋಪಿಸಿದ್ದರು.





