Mysore
15
overcast clouds

Social Media

ಬುಧವಾರ, 11 ಫೆಬ್ರವರಿ 2026
Light
Dark

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಪ್ರಕರಣ: ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆ

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆಯಾಗಿದೆ ಎನ್ನಲಾಗುತ್ತಿದೆ.

ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಇದೀಗ ಉಗ್ರರ ದಾಳಿ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆ ಮಾಡಲಾಗಿದೆ.

ಇನ್ನು ಪ್ರಧಾನಿ ಮೋದಿ ನಿವಾಸದಲ್ಲಿ ಉಗ್ರರ ದಾಳಿ ಕುರಿತು ಸಭೆ ನಡೆಸಲಾಗುತ್ತಿದ್ದು, ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಮೂರು ಸೇನೆಯ ಮುಖ್ಯಸ್ಥರು ಭಾಗಿಯಾಗಿದ್ದಾರೆ.

ಸಭೆಯಲ್ಲಿ ಉಗ್ರರ ವಿರುದ್ಧ ಏನೆಲ್ಲಾ ದಿಟ್ಟ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!