ಕಾಶ್ಮೀರ : ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಸಂಬಂಧ ತನಿಖೆ ನಡೆಸುತ್ತಿರುವ ಎನ್ಐಎ ಇದೀಗ ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದೆ.
ವಿಧಿ ವಿಜ್ಞಾನ ತಜ್ಞರು ಪ್ರತ್ಯಕ್ಷದರ್ಶಿಗಳ ಮಾಹಿತಿ ಆಧರಿಸಿ ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡಿಸಿದ್ದಾರೆ. ಆಸೀಫ್, ಸುಲೇಮಾನ್, ಅಬು ಫೋಟೋವನ್ನು ಸೇನೆ ರಿಲೀಸ್ ಮಾಡಿದೆ.
ಪಹಲ್ಗಾಮ್‌ನಲ್ಲಿ ಪ್ರವಸಿಗರನ್ನ ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿಯಲ್ಲಿ ಕನ್ನಡಿಗರಾದ ಮಂಜುನಾಥ್, ಭರತ್ ಭೂಷಣ್, ಮಧೂಸೂಧನ್ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಉಗ್ರರ ದಾಳಿಗೆ ಜಾಗತಿಕ ಮಟ್ಟದಲ್ಲಿ ಖಂಡನೆ ವ್ಯಕ್ತವಾಗಿದೆ.





